5:21 AM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷೆಯಾಗಿ ಸಾನ್ವಿ ಸುವರ್ಣ

29/10/2023, 09:06

ಬಂಟ್ವಾಳ(reporterkarnataka.com):ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಘಟಕವು ನಿರ್ವಹಿಸುವ ಬಂಟ್ವಾಳ ತಾಲೂಕು 17ನೇಯ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಕಡೇಶಿವಾಲಯ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯ ಸಹಭಾಗಿತ್ವದಲ್ಲಿ ಡಿಸೆಂಬರ್ 6 ರಂದು ನಡೆಸಲಾಗುವುದು. ಸಮ್ಮೇಳನದಲ್ಲಿ ತಾಲೂಕಿನ 18 ವರ್ಷ ಪ್ರಾಯಕ್ಕಿಂತ ಕೆಳಗಿನ ಮಕ್ಕಳು ಭಾಗವಹಿಸಲಿದ್ದಾರೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆತಿಥೇಯ ಸಂಸ್ಥೆಯಲ್ಲಿ ಏಳನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಸಾನ್ವಿ ಸುವರ್ಣ ಆಯ್ಕೆಯಾಗಿರುತ್ತಾರೆ ಎಂದು ‘ಮಕ್ಕಳ ಕಲಾ ಲೋಕ’ ದ ಅಧ್ಯಕ್ಷ ರಮೇಶ ಎಂ. ಬಾಯಾರು ತಿಳಿಸಿರುವರು.
ಸಾನ್ವಿ ಅವರು ಸುಂದರ ಪೂಜಾರಿ ವಿಶಾಲಾಕ್ಷಿ ದಂಪತಿ ಪುತ್ರಿ. ಕಲಿಕೆಯಲ್ಲಿ ಉತ್ತಮ ಸಾಧನೆ ತೋರುತ್ತಿರುವ ಬಾಲ ಪ್ರತಿಭೆ. ಎಳೆಯ ವಯಸ್ಸಿನಲ್ಲಿಯೇ ವಿವಿಧ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿ ಕೊಂಡಿರುವ ಇವರು ಭಾರತ ಸರಕಾರದ ಶಿಕ್ಷಣ ಸಚಿವಾಲಯದಿಂದ “ವೀರಗಾಥಾ” ಪ್ರಮಾಣ ಪತ್ರ ಪಡೆದಿರುವರು. ಶಶಸ್ತ್ರ ಪಡೆಗಳ ಶೂರರ ಸ್ಮರಣಾರ್ಥವಾಗಿ ಈ ಪ್ರಮಾಣ ಪತ್ರ ನೀಡಲಾಗಿದೆ. ಭಾರತೀಯ ಜೀವ ವಿಮಾ ನಿಗಮವು ನೀಡುವ ಸಾಧನಾ ಪ್ರಶಸ್ತಿಯನ್ನು ಪಡೆದ ಈಕೆ ಉತ್ತಮ ಮಾತುಗಾರರು. ಸ್ಪರ್ಧಾತ್ಮ ಪರೀಕ್ಷೆಗಳಿಗೆ ತಯಾರಿ, ಫೊಟೊಗ್ರಾಫಿ, ನೃತ್ಯ, ಬರವಣಿಗೆ, ಚಿತ್ರ ಕಲೆ ಇವರ ಹವ್ಯಾಸ ಎಂದು ಶಾಲಾ ಮುಖ್ಯೋಪಾಧ್ಯಾಯ ಬಾಬು ಪೂಜಾರಿ ಕೆ. ಹೇಳಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು