7:07 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬಂಟ್ವಾಳ ತಾಲೂಕು ಪ್ರೌಢಶಾಲಾ ಕನ್ನಡ ಶಿಕ್ಷಕರಿಗೆ ಕನ್ನಡ ಭಾಷಾ ಕಾರ್ಯಾಗಾರ

01/10/2024, 15:00

ಬಂಟ್ವಾಳ(reporterkarnataka.com): ಸಂಸ್ಕೃತಿ ನಾಶವಾದರೆ ಭಾಷೆ ನಾಶವಾಗುತ್ತದೆ. ಒಂದು ಭಾಷೆಯ ಬಳಕೆ ಕಡಿಮೆಯಾದರೆ ಆ ಭಾಷೆ ನಿಧಾನವಾಗಿ ಅಳಿವಿನಂಚಿಗೆ ಹೋದಂತೆ. ಹಾಗಾಗಿ ಕನ್ನಡ ಸಂಸ್ಕೃತಿ ನಾಶವಾಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಅದ್ಭುತ ಸಾಹಿತ್ಯದ ಕನ್ನಡ ಭಾಷೆಯನ್ನು ಉಳಿಸುವ ಅನಿವಾರ್ಯತೆ ಕನ್ನಡಿಗರಾದ ನಮಗೆ ಉಂಟಾಗಿದೆ. ಆ ನಿಟ್ಟಿನಲ್ಲಿ ಕನ್ನಡ ಶಿಕ್ಷಕರ ಪಾತ್ರ ಶ್ರೇಷ್ಠವಾದದ್ದು “ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಶ್ರೀ ತುಕರಾಂ ಪೂಜಾರಿ ಬಂಟ್ಟಾಳ ಹೇಳಿದರು.
ಅವರು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಬಂಟ್ವಾಳ ತಾಲೂಕು ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರಿಗೆ ಜರುಗಿದ ಕನ್ನಡ ಭಾಷಾ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅಭಿಪ್ರಾಯಪಟ್ಟರು.
ಕಾರ್ಯಾಗಾರದ ಉದ್ಘಾಟನೆಯನ್ನು ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥನ್ ನೆರವೇರಿಸಿ ” ಕನ್ನಡ ಮಾತೃಭಾಷೆಯನ್ನು ಪ್ರೀತಿಸಬೇಕು. ಕನ್ನಡದ ಬಳಕೆಯನ್ನು ಬೆಳೆಸಬೇಕು. ಆ ನಿಟ್ಟಿನಲ್ಲಿ ಕನ್ನಡ ಭಾಷಾ ಶಿಕ್ಷಕರ ಜವಾಬ್ದಾರಿ ಮಹತ್ತರವಾದದ್ದು ” ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ವಿಶ್ವನಾಥ ಬಂಟ್ಟಾಳ ವಹಿಸಿದರು. ಹಾಗೂ ಪಾಣೆಮಂಗಳೂರು ಹೋಬಳಿ ಅಧ್ಯಕ್ಷರಾದ ಮಹಮ್ಮದ್ ನಂದಾವರ ಉಪಸ್ಥಿತರಿದ್ದರು. ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಶ್ರೀ ವಿ ಸು ಭಟ್ ಇವರು ಸ್ವಾಗತಿಸಿದರು. ಗೌರವ ಕಾರ್ಯದರ್ಶಿಗಳಾದ ಶ್ರೀ ರಮಾನಂದ ನೂಜಿಪ್ಪಾಡಿ ಕಾರ್ಯಕ್ರಮ ನಿರ್ವಹಣೆ ಮಾಡಿದರು

ಇತ್ತೀಚಿನ ಸುದ್ದಿ

ಜಾಹೀರಾತು