3:35 PM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಬಂಟ್ವಾಳ ಭಂಡಾರಿಬೆಟ್ಟು ಯುವಜನ ವ್ಯಾಯಾಮ ಶಾಲೆಗೆ ತುಲು ಲಿಪಿ ನಾಮಫಲಕ 

11/10/2021, 11:04

ಬಂಟ್ವಾಳ(reporterkarnataka.com):

ವಿಶ್ವ ತುಲು ಲಿಪಿ ದಿನವಾದ ಅಕ್ಟೋಬರ್ 10 ರಂದು ಬಂಟ್ವಾಳ ತಾಲೂಕಿನ ಭಂಡಾರಿಬೆಟ್ಟುವಿನಲ್ಲಿ ಯುವಜನ ವ್ಯಾಯಾಮ ಶಾಲೆಯ ನಾಮಫಲಕವನ್ನು ತುಲು ಲಿಪಿಯಲ್ಲಿ ಹಾಕಲಾಯಿತು. 

ತುಲು ಲಿಪಿ ಶಿಕ್ಷಕರು ಹಾಗೂ ಜೈ ತುಲುನಾಡ್ (ರಿ.) ಸಂಘಟನೆಯ ಉಪ ಸಂಘಟನಾ ಕಾರ್ಯದರ್ಶಿ ಜಗದೀಶ ಗೌಡ ಕಲ್ಕಳ ಅವರು ತುಲು ಲಿಪಿ ನಾಮಫಲಕವನ್ನು ಅನಾವರಣಗೊಳಿಸಿದರು.

ಹಾಗೆಯೇ ತುಲು ಲಿಪಿ ದಿನದ ವಿಶೇಷತೆ ಹಾಗೂ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ (ಪುವೆಂಪು) ಇವರ ಹುಟ್ಟುಹಬ್ಬವನ್ನು ತುಲು ಲಿಪಿ ದಿನವಾಗಿ ಆಚರಿಸುವುದರ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ತುಲು ಲಿಪಿಯಲ್ಲಿ ನಾಮಫಲಕವನ್ನು ಬರೆದ ಜಯ ಆರ್ಟ್ಸ್‌ನ ಜಯರಾಮ, ಯುವಜನ ವ್ಯಾಯಾಮ ಶಾಲೆ ಭಂಡಾರಿಬೆಟ್ಟು ಇದರ ಅಧ್ಯಕ್ಷರಾದ ಹೆನ್ರಿ ಪಿರೇರಾ ಉಪಸ್ಥಿತಿ ಇದ್ದರು. ತುಲುನಾಡ ಯುವಸೇನೆ ಬಂಟ್ವಾಳ ಇವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ತುಲು ಲಿಪಿ ಶಿಕ್ಷಕರಾದ ಪೃಥ್ವಿ ತುಲುವೆ ಕಾರ್ಯಕ್ರಮವನ್ನು ನಿರೂಪಿಸಿದರು. ನಾಮಫಲಕ ಅನಾವರಣದ ನಂತರ ಜೈ ತುಲುನಾಡ್ (ರಿ.), ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ತುಲುನಾಡ ಯುವಸೇನೆ ಬಂಟ್ವಾಳ ಇವರ ಸಹಭಾಗಿತ್ವದಲ್ಲಿ ನಡೆದ ಬಲೆ ತುಲು ಲಿಪಿ ಕಲ್ಪುಗ ಕಾರ್ಯಾಗಾರದ ತುಲು ಲಿಪಿ ಪರೀಕ್ಷೆ ನಡೆಯಿತು. ತುಲು ಲಿಪಿ ಶಿಕ್ಷಕರಾದ ಜಗದೀಶ ಗೌಡ ಕಲ್ಕಳ, ಪೂರ್ಣಿಮಾ ಬಂಟ್ವಾಳ ಮತ್ತು ಪೃಥ್ವಿ ತುಲುವೆ ಪರೀಕ್ಷೆಯನ್ನು ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು