ಇತ್ತೀಚಿನ ಸುದ್ದಿ
ಬಂಟ್ವಾಳದ ವಗ್ಗ ಬಳಿ ಆ್ಯಂಬುಲೆನ್ಸ್ ಪಲ್ಟಿ: ಗಂಭೀರ ಗಾಯಗೊಂಡಿದ್ದ ಚಾಲಕ ಸಾವು
18/08/2023, 18:19
ಬಂಟ್ವಾಳ(reporterkarnataka.com): ಖಾಸಗಿ ಆ್ಯಂಬುಲೆನ್ಸ್ ವಾಹನವೊಂದು ಪಲ್ಟಿಯಾಗಿ ವಾಹನ ಚಾಲಕ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ
ವಗ್ಗ ಬಳಿಯ ಅಂಚಿಕಟ್ಟೆ ಎಂಬಲ್ಲಿ ನಡೆದಿದೆ.
ಮೃತಪಟ್ಟ ಅಂಬುಲೆನ್ಸ್ ಚಾಲಕನನ್ನು ಗುರುವಾಯನಕೆರೆ ನಿವಾಸಿ ಶಬೀರ್ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ಕಡೆಯಿಂದ ರೋಗಿಯೊಬ್ಬರನ್ನು ತುರ್ತಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಆ್ಯಂಬುಲೆನ್ಸ್ ವಗ್ಗ ಸಮೀಪದ ಕೊಪ್ಪಳ ಅಂಚಿಕಟ್ಟೆ ಎಂಬಲ್ಲಿ ರಸ್ತೆ ಮಧ್ಯ ಪಲ್ಟಿಯಾಗಿತ್ತು. ಅಪಘಾತದಲ್ಲಿ ಚಾಲಕ ಶಬೀರ್ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ಬೇರೆ ವಾಹನದಲ್ಲಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ
ಆ್ಯಂಬುಲೆನ್ಸ್ ಚಾಲಕ ಶಬೀರ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.