10:00 AM Sunday5 - October 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್

ಇತ್ತೀಚಿನ ಸುದ್ದಿ

ಬರೇ ಕೇಂದ್ರದ ಅನುದಾನದಿಂದ ಮಂಗಳೂರು ಮಹಾನಗರ ಪಾಲಿಕೆ 60 ವಾರ್ಡ್ ಅಭಿವೃದ್ಧಿ ಅಸಾಧ್ಯ: ಸರಕಾರದ ಗಮನ ಸೆಳೆದ ಶಾಸಕ ಕಾಮತ್

13/12/2024, 19:52

ಬೆಳಗಾವಿ(reporterkarnataka.com):ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳೂರು ನಗರ ದಕ್ಷಿಣಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಅವರು ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದರು.
ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮಂಗಳೂರು ಮಹಾನಗರ ಪಾಲಿಕೆಗೆ ಬಿಡುಗಡೆಗೊಳಿಸಲಾದ ಅನುದಾನದ ಬಗ್ಗೆ ಪ್ರಶ್ನಿಸಿ, ಕೇವಲ ಕೇಂದ್ರ ಸರ್ಕಾರದ ಅನುದಾನದಿಂದಲೇ ಮಹಾನಗರ ಪಾಲಿಕೆಯ 60 ವಾರ್ಡುಗಳನ್ನೂ ಅಭಿವೃದ್ಧಿಗೊಳಿಸಲು ಅಸಾಧ್ಯ, ರಾಜ್ಯ ಸರ್ಕಾರವೂ ವಿಶೇಷ ಅನುದಾನಗಳನ್ನು ನೀಡುವ ಬಗ್ಗೆ ಕ್ರಮವಹಿಸಬೇಕು ಎಂದು ಶಾಸಕರು ಆಗ್ರಹಿಸಿದರು.
ಕಳೆದ ಅವಧಿಯಲ್ಲಿ ಕೆಯುಡಿಎಫ್ ಸಿ ವತಿಯಿಂದ ಕ್ಷೇತ್ರದಲ್ಲಿ ಆರಂಭಗೊಂಡಿದ್ದ ಕಾಮಗಾರಿಗಳಿಂದಾಗಿ ಹಲವೆಡೆ ರಸ್ತೆಗಳು ಹದಗೆಟ್ಟಿದ್ದು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಾಮಗಾರಿ ಮುಗಿದ ನಂತರ ಮರು ರಸ್ತೆ ನಿರ್ಮಾಣಕ್ಕೆಂದೇ ಈ ಹಿಂದೆ ಮೀಸಲಿರಿಸಲಾಗಿದ್ದ ಸುಮಾರು 72 ಕೋಟಿ ಅನುದಾನವನ್ನು ಬೇರೆ ಯೋಜನೆಗಳಿಗೆ ವರ್ಗಾಯಿಸಿದ್ದೇ ಇಂದು ಇಲ್ಲಿನ ಹೊಂಡಗಳನ್ನೂ ಸಹ ಮುಚ್ಚಲಾಗದ ಪರಿಸ್ಥಿತಿ ನಿರ್ಮಾಣವಾಗಿರುವುದಕ್ಕೆ ಮೂಲ ಕಾರಣ, ಹಾಗಾಗಿ ಇದನ್ನು ಸಚಿವರು ಆದ್ಯತೆಯ ಮೇರೆಗೆ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.
ಒಂದೂವರೆ ವರ್ಷ ಕಳೆದರೂ ಅಮೃತ್ ಯೋಜನೆಗಳು ಇನ್ನೂ ಸಹ ಟೆಂಡರ್ ಹಂತದಲ್ಲಿಯೇ ಇರುವ ಬಗ್ಗೆ, ಬಹು ಬೇಡಿಕೆಯ ಜಲಸಿರಿ ಯೋಜನೆ ಸ್ಥಗಿತಗೊಂಡಿರುವ ಬಗ್ಗೆ, ಪ್ರಕೃತಿ ವಿಕೋಪದಿಂದಾಗಿ ನಗರದ ಅಲ್ಲಲ್ಲಿ ರಸ್ತೆ ಸಹಿತ ಅನೇಕ ರೀತಿಯ ಹಾನಿಯ ಬಗ್ಗೆ ಸಂಬಂಧಪಟ್ಟ ಸಚಿವರಿಗೆ ಮನವಿ ಸಲ್ಲಿಸಿದ್ದರೂ ಸೂಕ್ತ ಸ್ಪಂದನೆ ದೊರಕದ ಬಗ್ಗೆ ಹಾಗೂ ಈ ಹಿಂದಿನ ಅವಧಿಯ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ 125 ಕೋಟಿಯ ಯೋಜನೆಯನ್ನು ಪ್ರಸ್ತುತ ರಾಜ್ಯ ಸರ್ಕಾರವು ಸ್ಥಗಿತಗೊಳಿಸಿದ್ದು ಅದನ್ನು ಪುನರ್ ಆರಂಭಿಸುವ ಬಗ್ಗೆ ಶಾಸಕರು ಸರ್ಕಾರದ ಗಮನ ಸೆಳೆದರು.

ಇತ್ತೀಚಿನ ಸುದ್ದಿ

ಜಾಹೀರಾತು