7:45 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಬಸನಗೌಡ ಬಾದರ್ಲಿ ಫೌಂಡೇಶನ್ ನಿಂದ 31 ವಾರ್ಡುಗಳಿಗೆ ಔಷಧ ಸಿಂಪಡಣೆ ಕಾರ್ಯಕ್ಕೆ ಚಾಲನೆ

03/06/2021, 06:58

ಸಿಂಧನೂರು(reporterkarnataka news): ಬಸನಗೌಡ ಬಾದರ್ಲಿ ಫೌಂಡೇಶನ್ ವತಿಯಿಂದ ಬ ನಗರದ 31 ವಾರ್ಡುಗಳಿಗೆ ಔಷಧಿ ಸಿಂಪಡಣೆ ಮಾಡುವ ಕಾರ್ಯಕ್ಕೆ ಚಾಲನೆ‌ ನೀಡಲಾಯಿತು.

ನಗರದ ಆದಿಶೇಷ ದೇವಸ್ಥಾನದಲ್ಲಿ ವಾಹನಗಳಿಗೆ ಪೂಜೆ ಸಲ್ಲಿಸುವ ಮೂಲಕ ನಿವೃತ್ತ ಶಿಕ್ಷಕ ವೆಂಕನಗೌಡ ವಟಗಲ್ ಸಿಂಪಡಣೆ ಕಾರ್ಯಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಬಸನಗೌಡ ಬಾದರ್ಲಿ ಅವರು ತಮ್ಮ ಫೌಂಡೇಷನ್ ಮೂಲಕ ಅನೇಕ ಸಾಮಾಜಿಕ ಸೇವೆಯನ್ನು ಮಾಡುತ್ತಿದ್ದಾರೆ. ಕೊರೊನಾ ಸಂಕಷ್ಟ ದಲ್ಲಿ ಫೌಂಡೇಶನ್ ಸೇವೆ ಶ್ಲಾಘನೀಯವಾಗಿದೆ. ಬಡ ಜನರಿಗೆ ಆಹಾರ ಕಿಟ್ ವಿತರಣೆ, ಸ್ಯಾನಿಟೈಜರ್ ಸಿಂಪಡಣೆ, ಬಡ ಜನರಿಗೆ ದಿನನಿತ್ಯದ ಊಟದ ವ್ಯವಸ್ಥೆ ಸೇರಿದಂತೆ ಅನೇಕ ಸಾಮಾಜಿಕ ಸೇವೆಗಳನ್ನು ಮಾಡುವ ಜನಮಾನಸದಲ್ಲಿ ಅಚ್ಚಳಿಯದೆ ಉಳಿಯುತ್ತಿದ್ದಾರೆ ಎಂದರು.

ನಂತರ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಬಾದರ್ಲಿ ಮಾತನಾಡಿ, ಬದುಕು ಶಾಶ್ವತ ಅಲ್ಲ, ನಾವು ಬದುಕಿರುವರೆಗೆ ಮಾಡುವ ಕಾರ್ಯಗಳೇ ಶಾಶ್ವತವಾಗಿ ಉಳಿಯುತ್ತವೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಬಡಜನರ ಪರ ನಿಲ್ಲುವುದು ಪ್ರತಿಯೊಬ್ಬ ಆದ್ಯ ಕರ್ತವ್ಯವಾಗಿದೆ. ಕೊರೊನಾ ತಡೆಗಟ್ಟಲು ಪ್ರತಿಯೊಬ್ಬರು ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ನಮ್ಮ ಫೌಂಡೇಶನ್ ನಿಂದ ಸ್ಯಾನಿಟೈಜರ್ ಸಿಂಪಡಣೆ ಮಾಡಲಾಗುತ್ತಿದೆ. ಈಗಾಗಲೇ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯತಿ ಮಟ್ಟದಲ್ಲಿ ಈಗಾಗಲೇ ಸಿಂಪಡಣೆ ಮಾಡಲಾಗಿದೆ ಎಂದರು.

 ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್, ಮುಖಂಡರಾದ ಸೋಮನಗೌಡ ಬಾದರ್ಲಿ, ವೆಂಕಟೇಶ ನಾಯಕ್, ಖಾಜಾ ಹುಸೇನ್ ರೌಡಕುಂದಾ, ಶಿವಕುಮಾರ ಜವಳಿ, ಬಷೀರ್ ಎತ್ಮಾರಿ, ರವಿ ಹಿರೇಮಠ, ವಿಶ್ವನಾಥ ಮಾಲಿಪಾಟೀಲ್, ಇಲಿಯಾಸ್ ಪಟೇಲ್, ಗೋಪಿಕೃಷ್ಣ, ಶರಣಯ್ಯ ಸ್ವಾಮಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಹಬೀಬ್ ಖಾಜಿ, ಗ್ರಾಮೀಣ ಘಟಕದ ಅಧ್ಯಕ್ಷ ಫಕೀರಯ್ಯ, ಶೈಬಾಜ್ , ಜಾವೀದ್,  ಮುನ್ನಾ, ಅಮೀನ್, ಅಸ್ಲಾಂ, ಯುಸೂಫ್ ಎತ್ಮಾರಿ, ಸಲ್ಮಾಂನ್, ಇರ್ಷಾದ್ ಸೇರಿದಂತೆ ಅನೇಕರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು