8:00 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಬಸವಣ್ಣನ ಆಶಯ ಮುಂದಿನ ಪೀಳಿಗೆಗೆ ತಲುಪಿಸಲು ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ: ಕೃಷ್ಣ ಬೈರೇಗೌಡ

19/12/2024, 21:50

*.ಐತಿಹಾಸಿಕ ಪ್ರದೇಶದ ಅಭಿವೃದ್ಧಿಗಾಗಿ ಪ್ರಾಧಿಕಾರ ಅಗತ್ಯವಿದೆ*
*•ಇತರೆ ಪ್ರಾಧಿಕಾರಗಳ ಮಾದರಿಯಲ್ಲೇ ಕಾನೂನು ರಚನೆ*
*•ಎರಡೂ ಸದನದಲ್ಲಿ ಸರ್ವಾನುಮತದಿಂದ ಅಂಗೀಕಾರ*


ಬೆಳಗಾವಿ(reporterkarnataka.com):
ವಿಶ್ವಜ್ಯೋತಿ ಬಸವಣ್ಣನವರ ವಿಚಾರಗಳನ್ನು, ವಿಶ್ವಕ್ಕೆ ಅವರು ನೀಡಿರುವ ಆದರ್ಶಗಳನ್ನು ಇಂದಿನ-ಮುಂದಿನ ಪೀಳಿಗೆಗೆ ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿಧೇಯಕ ನಿರ್ಮಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ಬುಧವಾರ ವಿಧಾನ ಪರಿಷತ್‌ನಲ್ಲಿ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಮಂಡಿಸಿ ಮಾತನಾಡಿದ ಅವರು, “ಕೂಡಲೇ ಸಂಗಮ ಅಭಿವೃದ್ಧಿ ಪ್ರಾಧಿಕಾರದ ಜೊತೆಯಲ್ಲೇ, ಬಸವನ ಬಾಗೇವಾಡಿಯ ಅಭಿವೃದ್ಧಿಯನ್ನೂ ಕೈಗೊಳ್ಳಲಾಗುತ್ತಿತ್ತು. ಆದರೆ, ನಾಡಿನ ಸಾಹಿತ್ಯ ಸಾಂಸ್ಕೃತಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಅಚ್ಚಳಿಯದ ಕೊಡುಗೆ ನೀಡಿರುವ ಬಸವನ ಬಾಗೇವಾಡಿ ಇತಿಹಾಸವನ್ನು ಜನರಿಗೆ ತಿಳಿಸಲು ಹಾಗೂ ಮುಂದಿನ ಪೀಳಿಗೆಗೆ ಪರಿಣಾಮಕಾರಿಯಾಗಿ ತಲುಪಿಸುವ ದೃಷ್ಠಿಯಿಂದ ಪ್ರತ್ಯೇಕ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿಧೇಯಕ ಮಂಡಿಸಲಾಗಿದೆ” ಎಂದರು.
ಮುಂದುವರೆದು, “ಬಸವನ ಬಾಗೇವಾಡಿ ಐತಿಹಾಸಿಕ ಹಿನ್ನೆಲೆ ಇರುವ ಪ್ರದೇಶ. ಹೀಗಾಗಿ ಈ ಪ್ರದೇಶದ ಅಭಿವೃದ್ಧಿಗೂ ಒಂದು ಪ್ರಾಧಿಕಾರ ರಚಿಸಬೇಕು ಎಂದು ಸದನದ ಅನೇಕ ಸದಸ್ಯರು ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದಾರೆ. ಅವರ ಒತ್ತಾಯ ಹಾಗೂ ನಮ್ಮ ಶ್ರೀಮಂತ ಇತಿಹಾಸವನ್ನು ಉಳಿಸಿಕೊಳ್ಳುವ ಉದ್ದೇಶದಿಂದ ಪ್ರಾಧಿಕಾರ ರಚಿಸಲಾಗಿದೆ. ಮೊದಮೊದಲು ಕನ್ನಡ ಸಂಸ್ಕೃತಿ ಇಲಾಖೆ ಆಯೋಗದಲ್ಲಿ ಈ ಪ್ರಾಧಿಕಾರದ ರಚನೆ ಸಂಬಂಧಿಸಿದ ಘೋಷಿಸಲಾಗಿತ್ತು. ಆದರೆ, ಪ್ರಾಧಿಕಾರ ಕಂದಾಯ ಇಲಾಖೆ ಅಡಿಯಲ್ಲಿ ಬರುವ ಕಾರಣ ಈ ಜವಾಬ್ದಾರಿಯನ್ನು ನಮಗೆ ವಹಿಸಲಾಗಿದೆ” ಎಂದರು.
“ಪ್ರಾಧಿಕಾರ ರಚನೆ ಸಂಬಂಧಿಸಿ ಕಳೆದ ಒಂದು ವರ್ಷದಿಂದ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಈಗಾಗಲೇ ನಮ್ಮಲ್ಲಿ ಸರ್ವಜ್ಞ, ಕೆಂಪೇಗೌಡ ಸೇರಿದಂತೆ ಹತ್ತಾರು ಪ್ರಾಧಿಕಾರಗಳಿದ್ದು, ಆ ಪ್ರಾಧಿಕಾರಗಳ ಕಾನೂನುಗಳನ್ನೇ ಆಧರಿಸಿ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗಿದೆ. ಈ ಪ್ರಾಧಿಕಾರದ ರಚನೆಯಿಂದ ಇಲ್ಲಿನ ಇತಿಹಾಸವನ್ನು ಜನರಿಗೆ ತಲುಪಿಸುವ ಜೊತೆಗೆ ಪ್ರವಾಸೋದ್ಯಮವೂ ಅಭಿವೃದ್ಧಿಯಾಗಲಿದೆ” ಎಂದು ಅಭಿಪ್ರಾಯಪಟ್ಟರು.
ವಿಧಾನ ಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರಗೊಂಡಿದ್ದ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ಸಭಾಧ್ಯಕ್ಷರಾದ ಬಸವರಾಜ ಹೊರಟ್ಟಿಯವರು ಪರಿಷತ್‌ನಲ್ಲೂ ಮತಕ್ಕೆ ಹಾಕಿದರು. ವಿಧೇಯಕವು ಪರಿಷತ್‌ನಲ್ಲೂ ಸರ್ವಾನುಮತದಿಂದ ಅಂಗೀಕಾರಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು