6:07 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಬಸವೇಶ್ವರ ಏತ ನೀರಾವರಿ ಯೋಜನೆ ಶೀಘ್ರದಲ್ಲಿ ಪೂರ್ಣ: ರೈತ ಸಮಾವೇಶದಲ್ಲಿ ಶಾಸಕ ರಾಜು ಕಾಗೆ ವಿಶ್ವಾಸ

12/10/2023, 13:32

ಶಿವರಾಯ ಲಕ್ಷ್ಮಣ ಕರಕರಮುಂಡಿ ಬೆಳಗಾವಿ

info.reporterkarnataka@gmail.com

ನಾನು ಮತ್ತು ಶಾಸಕ ಲಕ್ಷ್ಮಣ ಸವದಿ ಅವರು ಕೂಡಿಕೊಂಡು ಅಥಣಿ ಮತ್ತು ಕಾಗವಾಡ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಇಬ್ಬರು ಚರ್ಚಿಸಿ ಒಂದೇ ನಿರ್ಣಯ ತೆಗೆದುಕೊಂಡು ಅಭಿವೃದ್ಧಿ ಕಡೆ ಗಮನಹರಿಸಿದ್ದೇವೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.

ಜಿಲ್ಲೆಯ ಕಾಗವಾಡ ಕ್ಷೇತ್ರದ ಮದಬಾವಿ ಗ್ರಾಮದಲ್ಲಿ ಮತದಾರರ ಅಭಿನಂದನೆ ಹಾಗೂ ರೈತ ಸಮಾವೇಶದಲ್ಲಿ ಕಾಗವಾಡ ಶಾಸಕರಾಜು ಕಾಗೆ ಮತ್ತು ಅಥಣಿ ಶಾಸಕ, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಬಸವೇಶ್ವರ ಏತ ನೀರಾವರಿ ಯೋಜನೆಯ ಇನ್ನುಳಿದ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ ಕಾಗವಾಡ ಮತಕ್ಷೇತ್ರದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಿಕೊಡಲು ಶ್ರಮಿಸಲಾಗುವುದು ಎಂದರು. ರೈತರು ಜನಸಾಮಾನ್ಯರು ಕಾರ್ಯಕರ್ತರು ತಮ್ಮ ಸಮಸ್ಯೆಗಳಿದ್ದರೆ ನೇರವಾಗಿ ಸಂಪರ್ಕಿಸಿ ಯಾರಿಗೂ ಹೆದರುವ ಅವಶ್ಯಕತೆ ಇಲ್ಲ. ಸದಾ ನಿಮ್ಮ ಜೊತೆ ಇದ್ದು ಸ್ಪಂದಿಸುತ್ತೇನೆ ಎಂದು ಅವರು ಹೇಳಿದರು.
ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಮಹಿಳಾ ಘಟಕದ ಉಪಾಧ್ಯಕ್ಷೆ ಶೈಲಾಜ ಪಾಟೀಲ, ಕೆಪಿಸಿಸಿ ಸದಸ್ಯರಾದ ದಿಗ್ವಿಜಯ ಪವಾರ ದೇಸಾಯಿ, ಚಂದ್ರಕಾಂತ ಇಮ್ಮಡಿ, ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಮಹಾನಂದ ನಿವರ್ಗಿ, ವಿನಾಯಕ ಬಾಗಡಿ, ರವಿ ಪೂಜಾರಿ, ಪ್ರವೀಣ ನಾಯಿಕ,ಸಿದರಾಯ ತೋಡಕರ ಅಸ್ಲಾಂ ಮುಲ್ಲಾ, ನಿಜಗುಣಿ ಮಗದುಮ್ಮ,ಬಸಗೌಡಾ ಪಾಟೀಲ, ಕಾಮಗೌಡಾ ಪಾಟೀಲ,ನಾಯ್ಕುಬಾ ಶಿಂದೆ ಅಶೋಕ ಪೂಜಾರಿ,ಅಣ್ಣಾಸಾಬ ಪಾಟೀಲ,ಅಪ್ಪು ಚೌಗಲಾ, ವಿಠ್ಠಲ ಅವಳೆ, ಅಣ್ಣಪ್ಪ ನಿಂಬಾಳಕರ, ಸಂಜಯ ಅಡಾಟೆ, ಪರಗೊಂಡ ಮುಧೋಳ ಶಿವಾನಂದ ಮಗದುಮ್ಮ, ಸಂಜಯ ತಳವಾರಕರ, ಮಪ್ಪು ಪೂಜಾರಿ ಮೋಹನ ಬಾಗಡಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು