9:04 AM Sunday18 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಭಟ್ರಕುಮೇರು ಸ್ವಾಮಿ ಕೊರಗ ತನಿಯ ಕ್ಷೇತ್ರ; ಪ್ರತಿಷ್ಠಾ ವರ್ಧಂತಿ ಹಾಗೂ ಕೋಲ ಸೇವೆ ಸಂಪನ್ನ

09/12/2024, 21:32

ಮಂಗಳೂರು(reporterkarnataka.com): ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ದ್ವಿತೀಯ ವರ್ಷದ ಪ್ರತಿಷ್ಠಾ ವರ್ಧಂತಿ ಹಾಗೂ ಕೋಲ ಸೇವೆಯು ಭಾನುವಾರ ಬೆಳಿಗ್ಗೆ 10 ಗಂಟೆಗೆ ತಂತ್ರಿಗಳಾದ ರವಿ ಆನಂದ ಶಾಂತಿ ಆಡುಮರೋಳಿ ಅವರ ಮಾರ್ಗದರ್ಶನದಲ್ಲಿ ಜರುಗಿತು.
ಬೆಳಿಗ್ಗೆ 6ರಿಂದ ಪಂಚಗವ್ಯಶುದ್ಧಿ, ಸ್ವಸ್ತಿಪುಣ್ಯಹ, ಮಹಾಗಣಪತಿ ಹೋಮ ಸಾನಿಧ್ಯಕಲಶ, ಪ್ರಸನ್ನ ಸೇವೆ ಹಾಗೂ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಗಂಧಕಾಡು ಅವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ 12.30ಕ್ಕೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಿತು.
ಮಧ್ಯಾಹ್ನ 1 ಗಂಟೆಯಿಂದ ವಿಜಯ ಭಾಸ್ಕರ್ ಮತ್ತು ಗಣೇಶ್ ಮಂಗಳೂರು ಅವರಿಂದ “ಭಕ್ತಿಗಾನ ಸುಧೆ” ಸಂಜೆ 4 ಗಂಟೆಯಿಂದ “ಸ್ಪೂರ್ತಿ ಮಹಿಳಾ ಭಜನಾ ಮಂಡಳಿ” ಪದವಿನಂಗಡಿ ಮತ್ತು ಶ್ರೀ ನಾರಾಯಣಗುರು ಸೇವಾಸಂಘ, ಮೇರಿಹಿಲ್, ಗುರುನಗರ ಅವರಿಂದ ” ಭಜನೆ ಹಾಗೂ ಹರಿನಾಮ ಸಂಕೀರ್ತನೆ ನಡೆಯಿತು.
ಸಂಜೆ 7 ಗಂಟೆಗೆ ಅಗೆಲು ಸೇವೆ ನಡೆದು, ಬಳಿಕ ಅನ್ನಸಂತರ್ಪಣೆ ನೆರವೇರಿತು.


ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆದ ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆಯಲ್ಲಿ ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಅರ್ಚಕರಾದ ಕಮಲಾದೇವಿ ಅಸ್ರಣ ಅವರು ಆಶೀರ್ವಚನ ನೀಡಿದರು. ನಿರೂಪಕ ನವನೀತ್ ಶೆಟ್ಟಿ ಕದ್ರಿ, ಉದ್ಯಮಿಗಳಾದ ಲೀಲಾಕ್ಷ ಕರ್ಕೇರಾ, ಎಂ. ಅಶೋಕ್ ಶೇಟ್, ಲಚ್ಚು ಲಾಲ್, ಶ್ರೀ ಕ್ಷೇತ್ರದ ಸೇವಾಕರ್ತರುಗಳಾದ ಪೂಜ್ಯ ಮಾತಶ್ರೀ ವಿಮಲಾ ಹಾಗೂ ವಿಜಯ ಭಾಸ್ಕರ ಬಂಗೇರ ಮುಂತಾದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು