6:07 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಭತ್ತದ ಬೆಳೆಗೆ ಬೆಂಕಿ ರೋಗ: ಹತೋಟಿ ಹೇಗೆ?; ಬಣಕಲ್ ರೈತ ಸಂಪರ್ಕ ಕೇಂದ್ರದ ಸಲಹೆ ಏನು?

12/10/2023, 13:39

ಮೂಡಿಗೆರೆ(reporterkarnataka.com): ಇತ್ತೀಚಿನ ದಿನಗಳಲ್ಲಿ ಭತ್ತದ ಬೆಳೆಗೆ ಬೆಂಕಿ ರೋಗ ಹಾಗೂ ಎಲೆ ಸುರುಳಿ ಹುಳಗಳು ಕಾಣಿಸಿಕೊಳ್ಳುತ್ತಿದ್ದು ಇವುಗಳು ಭತ್ತದ ಬೆಳೆಯನ್ನು ನಾಶ ಮಾಡುತ್ತವೆ.
1.*ಬೆಂಕಿ ರೋಗ*: ಎಲೆಗಳ ಮೇಲೆ ಕಂದು ಬಣ್ಣದ ಚುಕ್ಕೆಗಳು ಕಾಣುತ್ತವೆ. ಇಂತಹ ಚುಕ್ಕೆಗಳ ಮಧ್ಯಭಾಗವೂ ನಂತರದ ದಿನಗಳಲ್ಲಿ ಬೂದಿ ಬಣ್ಣಕ್ಕೆ ತಿರುಗುತ್ತದೆ ಹಾಗೂ ಇಂತಹ ಹಲವಾರು ಚುಕ್ಕೆಗಳು ಸೇರಿ ಎಲೆಗಳು ಸುಟ್ಟಂತೆ ಕಾಣುತ್ತವೆ.

ಬೆಂಕಿ ರೋಗದ ಹತೋಟಿಗೆ
*TRICYCLAZOLE* ಶಿಲೀಂದ್ರ ನಾಶಕವನ್ನು *0.6 ಗ್ರಾಂ* ಅನ್ನು ಪ್ರತಿ ಲೀಟರಿಗೆ ಬೆರೆಸಿ ಸಿಂಪರಣೆ ಮಾಡಬೇಕಾಗಿರುತ್ತದೆ.

2. *ಎಲೆ ಸುರುಳಿ ಹುಳು*:
ಮರಿ ಹುಳುಗಳು ಎಲೆಗಳನ್ನು ಸುರುಳಿ ಮಾಡಿ ಅದರೊಳಗೆ ಇದ್ದು ಹಸಿರು ಭಾಗವನ್ನು ಕೆರೆದು ತಿನ್ನುವುದರಿಂದ ಗಳ ಮೇಲೆ ಬಿಳಿ ಪಟ್ಟಿಗಳು ಕಾಣುತ್ತವೆ.
ಈ ಹುಳುಗಳನ್ನು ಹತೋಟಿಗೆ ತರಲು ಕ್ಲೋರೋಫೈರಿಪಾಸ್ ಕೀಟನಾಶಕವನ್ನು 2 ಮಿ.ಲೀ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಣೆ ಮಾಡಬೇಕಾಗಿರುತ್ತದೆ.
Tricyclazole ಶಿಲೀಂದ್ರ ನಾಶಕ ಹಾಗೂ ಕ್ಲೋರೋಫೈರಿಫಾಸ್ ಕೀಟನಾಶಕವು ಬಣಕಲ್
ರೈತ ಸಂಪರ್ಕ ಕೇಂದ್ರದಲ್ಲಿ ಲಭ್ಯವಿರುತ್ತದೆ.
ರೈತರು ಇದರ ಸದುಪಯೋಗವನ್ನು ಪಡಿಸಿಕೊಳ್ಳಬೇಕಾಗಿ
ಬಣಕಲ್ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ
ವೆಂಕಟೇಶ್ ಎಂ ಆರ್
(8638162020) ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು