9:33 PM Monday23 - March 2026
ಬ್ರೇಕಿಂಗ್ ನ್ಯೂಸ್
ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ

ಇತ್ತೀಚಿನ ಸುದ್ದಿ

ಬಟ್ಟೆ, ರೆಡಿಮೇಡ್, ಚಪ್ಪಲಿಯನ್ನು ಅಗತ್ಯ ವಸ್ತುಗಳ ಸಾಲಿಗೆ ಸೇರಿಸಿ: ರಾಜ್ಯ ಸರಕಾರಕ್ಕೆ ವ್ಯಾಪಾರಿಗಳ ಮನವಿ

13/08/2021, 17:52

ಮಂಗಳೂರು(reporterkarnataka.com):ಇತರ ಅಗತ್ಯ ವಸ್ತುಗಳಂತೆ ಬಟ್ಟೆ , ರೆಡಿಮೇಡ್ ಚಪ್ಪಲಿಗಳನ್ನು ಪರಿಗಣಿಸಬೇಕೆಂದು ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿದೆ ಎಂದು ವ್ಯಾಪಾರಿಗಳ ಸಂಘಟನೆಯ ನಿರ್ದೇಶಕಿ ಸುಲೋಚನಾ ಭಟ್ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್ ಡೌನ್  ಅವಧಿಯಲ್ಲಿ ಬಟ್ಟೆ, ರೆಡಿಮೇಡ್ , ಚಪ್ಪಲಿ ಅಂಗಡಿದಾರರು ಕೋವಿದ್ ನಿಯಮ ಪ್ರಕಾರ ವ್ಯಾಪಾರ ಮಾಡಲು ಸರಕಾರ ಅವಕಾಶ ನೀಡದೆ ವ್ಯಾಪಾರಸ್ಥರು ಮಾತ್ರವಲ್ಲದೆ ಅವರ ಅಧೀನದಲ್ಲಿ ಕೆಲಸ ನಿರ್ವಹಿಸುವ ಸಾವಿರಾರು ಕುಟುಂಬಗಳು ನಿರ್ಗತಿಕರಾಗಿದ್ದಾರೆ ಎಂದರು.

ಸಂಘದ ಅಧ್ಯಕ್ಷ ಸಂತೋಷ್ ಕಾಮತ್ ಮಾತನಾಡಿ, ಸರಕಾರವು ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಅಥವಾ ಪರ್ಯಾಯ ದಿನಗಳಲ್ಲಿ ವ್ಯಾಪಾರಕ್ಕೆ ಅವಕಾಶ ಒದಗಿಸಬೇಕು. ಇಲ್ಲವೇ ಮೆಡಿಕಲ್, ಹಾಲು, ಆಸ್ಪತ್ರೆ, ಪತ್ರಿಕೆ ಇವುಗಳಿಗೆ ಮಾತ್ರ ಅನುಮತಿಸಿ, ಉಳಿದ ಎಲ್ಲಾ ವ್ಯಾಪಾರ ಗಳನ್ನು ಮಾಡದಂತೆ ಸಂಪೂರ್ಣ ಎರಡು ವಾರಗಳ ಕಾಲ ಲಾಕ್ ಡೌನ್ ಹೇರಿ ಕೊವಿಡ್  ಸಂಪೂರ್ಣ ನಿಯಂತ್ರಣಕ್ಕೆ ಬರುವಂತೆ ಸರ್ಕಾರ ಪ್ರಯತ್ನಿಸಬೇಕು ಎಂದು ಒತ್ತಾಯಿಸಿದರು.


ಸಂತೋಷ್  ಕಾಮತ್, ಎಂ. ಪಿ. ದಿನೇಶ್, ಪ್ರಸಾದ್  ನೈರ್,  ಸಂತೋಷ್ ಶೆಟ್ಟಿ, ಜನಾಬ್ ಸಯೀದ್,  ಇಸ್ಮಾಯಿಲ್, ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು