11:45 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಖ್ಯಾತಿಯ ಬಾವತೀಶ್ ಇನ್ನಿಲ್ಲ: ನಿಂತಿದ್ದ ಬಸ್‌ಗೆ ಬೈಕ್ ಡಿಕ್ಕಿ: ಅಪಘಾತದ ರಭಸಕ್ಕೆ ಹೊತ್ತಿ ಉರಿದ ದ್ವಿಚಕ್ರ ವಾಹನ

25/03/2026, 15:17

ಕಾರವಾರ(reporterkarnataka.com): ಪ್ರಸಿದ್ಧ ರಿಯಾಲಿಟಿ ಶೋ ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿಯಾಗಿದ್ದ ಬಾವತೀಶ್ (28) ಅವರು ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕೋಳಿಕೆರೆ ಸಮೀಪ ಈ ದುರ್ಘಟನೆ ಸಂಭವಿಸಿದೆ. ಹಳಿಯಾಳ ತಾಲೂಕಿನ ವಾಡಗರಡೊಳ್ಳಿ ನಿವಾಸಿಯಾದ ಬಾವತೀಶ್ ಅವರು ತಮ್ಮ ಟಿವಿಎಸ್ ಮೊಫೆಡ್ ವಾಹನದಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್‌ಗೆ ಅತೀ ವೇಗವಾಗಿ ಬಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.
ಡಿಕ್ಕಿಯ ರಭಸ ಎಷ್ಟಿತ್ತೆಂದರೆ, ಅಪಘಾತವಾದ ತಕ್ಷಣ ಅವರ ದ್ವಿಚಕ್ರ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ. ತೀವ್ರವಾಗಿ ಗಾಯಗೊಂಡಿದ್ದ ಬಾವತೀಶ್ ಅವರು ರಸ್ತೆಯಲ್ಲೇ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.
ಬಾವತೀಶ್ ಅವರು ರಿಯಾಲಿಟಿ ಶೋ ಮೂಲಕ ಜನಪ್ರಿಯತೆ ಗಳಿಸಿದ್ದರು. ಅವರ ಅನಿರೀಕ್ಷಿತ ಸಾವು ಕುಟುಂಬಸ್ಥರು ಹಾಗೂ ಅಭಿಮಾನಿ ವಲಯದಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ. ಘಟನೆಗೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು