8:56 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಭಯೋತ್ಪಾದಕ ಚಟುವಟಿಕೆಯ ಶಂಕೆ: ಶಂಕಿತ ವ್ಯಕ್ತಿಯ ಬಂಧನ; ಬೇಹುಗಾರ ಸಂಸ್ಥೆ ಜತೆ ಪೊಲೀಸ್ ಕಾರ್ಯಾಚರಣೆ

11/02/2023, 13:56

ಬೆಂಗಳೂರು(reporterkarnataka.com): ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳ ಜತೆ ಸಂಪರ್ಕ ಹೊಂದಿರುವ ಖಚಿತ ಮಾಹಿತಿ ಮೇರೆಗೆ ರಾಜ್ಯ ಪೊಲೀಸರು ವ್ಯಕ್ತಿಯೊಬ್ಬನನ್ನು ಶನಿವಾರ ಬೆಳಗ್ಗೆ ವಶಕ್ಕೆ ಪಡೆದಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಬಂಧಿತ ಆರೋಪಿ ಆರೀಫ್ ಎಂಬಾತ ಎಂದು ತಿಳಿದು ಬಂದಿದೆ. ಈತ ವಿದೇಶ ಪ್ರಯಾಣಕ್ಕೆ ತಯಾರಿ ನಡೆಸಿದ್ದ. ಅಷ್ಟರಲ್ಲಿಯೇ ಪೊಲೀಸರು, ವಶಕ್ಕೆ ಪಡೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯ ಪೊಲೀಸರು ಕೇಂದ್ರದ ಬೇಹುಗಾರಿಕೆ ಸಂಸ್ಥೆಯ ಅಧಿಕಾರಿಗಳ ಸಹಯೋಗದ ಜತೆಗೆ ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.
ದೇಶದಲ್ಲಿ ಕೋಮು ಭಾವನೆ ಕೆರಳಿಸಿ ಅಸ್ಥಿರತೆ ಉಂಟು ಮಾಡುತ್ತಿರುವ ಸಂಘಟನೆಗಳೂ ಹಾಗೂ ಅವುಗಳ ಸಂಪರ್ಕ ಹೊಂದಿರುವ ವ್ಯಕ್ತಿಗಳ ಬಗ್ಗೆ, ಸದಾ ಕಣ್ಗಾವಲು ಇರಿಸಿದ್ದು, ದೇಶವನ್ನು ದುರ್ಬಲಗೊಳಿಸುವ ಎಲ್ಲಾ ಪ್ರಯತ್ನಗಳನ್ನು, ಹತ್ತಿಕ್ಕಲಾಗುವುದು ಎಂದರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು