ಇತ್ತೀಚಿನ ಸುದ್ದಿ
ಬಿಬಿಎಂಪಿ: ಬಿಜೆಪಿ ಸರಕಾರ ಮಾಡಿದ್ದ ಕ್ಷೇತ್ರ ಪುನರ್ವಿಂಗಡಣೆ ರದ್ದು; ವಾರ್ಡ್ ಗಳ ಸಂಖ್ಯೆ 225ಕ್ಕೆ ಇಳಿಕೆ
19/08/2023, 20:33

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಮಾಡಿದ ಬೃಹತ್ ಬೆಂಗಳೂರು ಮಹಾನಗರಪಾಲಿಕೆ
(ಬಿಬಿಎಂಪಿ) ಕ್ಷೇತ್ರ ಪುನರ್ವಿಂಗಡಣೆಯನ್ನು ರಾಜ್ಯ ಕಾಂಗ್ರೆಸ್ ಸರಕಾರ ರದ್ದುಪಡಿಸಿದ್ದು, 243 ವಾರ್ಡ್ ಗಳ ಸಂಖ್ಯೆಯನ್ನು 225ಕ್ಕೆ ಇಳಿಸಿದೆ.
ಬಿಜೆಪಿ ಸರಕಾರ ಬಿಬಿಎಂಪಿಯ 198 ವಾರ್ಡ್ ಗಳನ್ನು 243ಕ್ಕೇರಿಸಿತ್ತು. ಕಾಂಗ್ರೆಸ್ ಮತ್ತು ಜನತಾ ದಳ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಆದರೆ ಬಿಜೆಪಿ ಇದಕ್ಕೆ ಕ್ಯಾರೇ ಅನ್ನಲಿಲ್ಲ. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಬಿಜೆಪಿ ಅಧಿಕಾರದಲ್ಲಿದ್ದಾಗ ಹೊರಡಿಸಿದ ಆದೇಶವನ್ನು ರದ್ದುಪಡಿಸಿದೆ. 243 ವಾರ್ಡ್ ಗಳನ್ನು ರದ್ದುಪಡಿಸಿ 225ಕ್ಕೆ ಇಳಿಸಿದೆ. ಈ ಕುರಿತು ಗಜೆಟ್ ನೋಟಿಫಿಕೇಶನ್ ಹೊರಡಿಸಿದೆ. ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದ ಉನ್ನತ ಮಟ್ಟದ ಸಮಿತಿ ಮಾಡಿದ ಶಿಫಾರಸ್ಸಿನಂತೆ ಕ್ಷೇತ್ರ ಪುನರ್ ವಿಂಗಡಣೆ ಮಾಡಲಾಗಿದೆ.