5:59 AM Sunday14 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಬಿ.ಸಿ. ರೋಡ್: ಭೀಕರ ರಸ್ತೆ ಅಪಘಾತಕ್ಕೆ ನವವಿವಾಹಿತೆ ಸ್ಥಳದಲ್ಲೇ ಸಾವು; ಪತಿಗೆ ಗಂಭೀರ ಗಾಯ

07/09/2024, 22:18

ಬಂಟ್ವಾಳ(reporterkarnataka.com): ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ಸಮೀಪದ ತಲಪಾಡಿ ಬಳಿ ಶನಿವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರ ಗಾಯಗೊಂಡಿದ್ದಾರೆ.
ಮಾಣಿ ಸಮೀಪದ ಪೆರ್ನೆ ಬಳಿಯ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾವನ್ನಪ್ಪಿದ ಗೃಹಿಣಿ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಂಪತಿ ಕಾರಿನಲ್ಲಿ ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸ್​ ಮಂಗಳೂರಿನತ್ತ ಪ್ರಯಾಣಿಸುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ದಾಟಿ, ಮತ್ತೊಂದು ಬದಿಗೆ ಹಾರಿದ್ದು, ಬಳಿಕ ಮಂಗಳೂರಿನಿಂದ ಬಿ.ಸಿ.ರೋಡ್​​​ನತ್ತ ಬರುತ್ತಿದ್ದ ಕೆಎಸ್​​ಆರ್​​ಟಿಸಿ ಬಸ್​ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ನವವಿವಾಹಿತೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೆ.5ರಂದು ಅನಿಶ್ ಕೃಷ್ಣ ಹಾಗೂ ಮಾನಸ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಇಬ್ಬರೂ ಮಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಮೆಲ್ಕಾರ್ ಟ್ರಾಫಿಕ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು