4:12 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಬಿ.ಸಿ. ರೋಡ್: ಬಿಜೆಪಿಯಿಂದ ಮತದಾರರ ಚೇತನಾ ಮಹಾಭಿಯಾನ ಕಾರ್ಯಕ್ರಮದ ಮಾಹಿತಿ ಸಭೆ

12/09/2023, 20:21

ಬಂಟ್ವಾಳ(reporterkarnataka.com): ಮುಂಬರುವ ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಬಂಟ್ವಾಳ ಬಿಜೆಪಿ ಮಂಡಲದ ವತಿಯಿಂದ ಮತದಾರರ ಚೇತನಾ ಮಹಾಭಿಯಾನ ಕಾರ್ಯಕ್ರಮದ ಮಾಹಿತಿ ಸಭೆಯು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು.
ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಮಂಡಲದ ನಿಕಟಪೂರ್ವ ಅಧ್ಯಕ್ಷರು, ಮತದಾರರ ಚೇತನಾ ಮಹಾಭಿಯಾನದ ಜಿಲ್ಲಾ ಸಂಚಾಲಕರ ದೇವದಾಸ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ ಈ ಮಹಾಭಿಯಾನದ ಕಾರ್ಯ ಯೋಜನೆ ಮತ್ತು ಕಾರ್ಯಕ್ರಮಗಳ ಮಾಹಿತಿ ನೀಡಿದರು.
ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಸಭೆಯನ್ನು ಉದ್ಧೇಶಿಸಿ ಮಾತಾಡಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಮತ್ತು ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಮಾತನಾಡಿ,ಬ ಬಂಟ್ವಾಳ ಬಿಜೆಪಿಯೊಂದಿಗೆ ಸದಾ ನಿಕಟ ಸಂಪರ್ಕದಲ್ಲಿರುವ ಶಾಸಕ ರಾಜೇಶಣ್ಣನವರ ಸಹಕಾರದಿಂದ ಪ್ರತಿ ಬೂತಿನಲ್ಲಿ ಮತದಾರರ ಚೇತನಾ ಕಾರ್ಯವನ್ನು ಮೊದಲಿನಿಂದಲೇ ಮಾಡಿಕೊಂಡು ಬಂದಿದೆ. ಮತದಾರರ ಸೇರ್ಪಡೆ ಕಾರ್ಯದಲ್ಲಿ ಬಂಟ್ವಾಳ ಬೇರೆ ಕ್ಷೇತ್ರಗಳಿಗೆ ಮಾದರಿಯಾಗಿದೆ. ಮುಂದಿನ ದಿನಗಳಲ್ಲಿ ಈ ಮತದಾರರ ಚೇತನ ಮಹಾಭಿಯಾನವನ್ನು ಬಂಟ್ವಾಳವು ಅತ್ಯಂತ ಯಶಸ್ವಿಯಾಗಿ ನಡೆಸುವ ಎಲ್ಲಾ ಸಾಮರ್ಥ್ಯವನ್ನು ಹೊಂದಿದೆ ” ಎಂದರು.
ಈ ಸಭೆಯಲ್ಲಿ ಜಿಲ್ಲಾ ಬಿಜೆಪಿಯ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ್, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ರಾಜ್ಯ ನಾಯಕಿ ಸುಲೋಚನಾ ಜಿ.ಕೆ.ಭಟ್, ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ್ ಶ್ರೀ ಸಂದೇಶ್ ಶೆಟ್ಟಿ, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾದ
ದಿನೇಶ್ ಅಮ್ಟೂರು, ಮುಂತಾದವರು ಉಪಸ್ಥಿತರಿದ್ದರು. ಮಂಡಲ ಪದಾಧಿಕಾರಿಗಳು, ಜಿಲ್ಲಾ ಪ್ರಮುಖರು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಜನ ಪ್ರತಿನಿಧಿಗಳು, ಕ್ಷೇತ್ರ ಪ್ರಮುಖರು ಭಾಗವಹಿಸಿದ ಈ ಸಭೆಯಲ್ಲಿ ಕ್ಷೇತ್ರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಕಿಶೋರ್ ಪಲ್ಲಿಪಾಡಿ ವಂದೇ ಮಾತರಂ ಗೀತೆ ಹಾಡಿದರು. ಕ್ಷೇತ್ರ ಬಿಜೆಪಿ ಉಪಾಧ್ಯಾಕ್ಷರಾದ ವಜ್ರನಾಥ ಕಲ್ಲಡ್ಕ ಸ್ವಾಗತಿಸಿದರು. ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು