4:12 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಬಿ.ಸಿ.ರೋಡ್: ಬಿಜೆಪಿ ರೈತ ಮೋರ್ಚಾದಿಂದ ರಾಜ್ಯ ಸರಕಾರ ವಿರುದ್ಧ ಪ್ರತಿಭಟನೆ

13/09/2023, 11:23

ಬಂಟ್ವಾಳ(reporterkarnataka.com): ಬಂಟ್ವಾಳ ಬಿಜೆಪಿ ಮಂಡಲದ ಬಿಜೆಪಿ ರೈತ ಮೋರ್ಚಾ ವತಿಯಿಂದ ರೈತ ವಿರೋಧಿ ಮತ್ತು ಭ್ರಷ್ಟಾಚಾರ ನೀತಿಯ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಬಿ.ಸಿ. ರೋಡಿನ ಪ್ಲೈ ಓವರ್ ನ ಅಡಿಭಾಗದಲ್ಲಿ ನಡೆಯಿತು.
ಬೂಡ ಮಾಜಿ ಅಧ್ಯಕ್ಷ ದೇವದಾಸ್ ಶೆಟ್ಟಿ ಮಾತನಾಡಿ, ರಾಜ್ಯದ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರ ರೈತ ವಿರೋಧಿಯಾದ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದ ಅವರು ಮಾಜಿ ಮುಖ್ಯ ಮಂತ್ರಿ ಯಡಿಯೂರಪ್ಪ ಅವರು ರೈತರಿಗೆ ಕೇಂದ್ರದ ಕಿಸಾನ್ ಸಮ್ಮಾನ್ ಯೋಜನೆಯ ಮೂಲಕ ರಾಜ್ಯದಿಂದ 4 ಸಾವಿರ ರೂ.ಗಳನ್ನು ನೀಡುವ ಮೂಲಕ ರೈತರಿಗೆ ಪ್ರೋತ್ಸಾಹ ನೀಡಿದರೆ ಸಿದ್ದರಾಮಯ್ಯ ನೇತ್ರತ್ವದ ಸರಕಾರ ಅದನ್ನು ನಿಲ್ಲಿಸಿದೆ. ಇದರ ಜೊತೆಗೆ ಬಸವರಾಜ ಬೊಮ್ಮಾಯಿ ಅವರ ಆಡಳಿತ ಅವಧಿಯಲ್ಲಿ ಜಾರಿ‌ಮಾಡಲಾಗಿದ್ದ ವಿದ್ಯಾನಿಧಿ ಯೋಜನೆಯನ್ನು ನಿಲ್ಲಿಸುವ ಮೂಲಕ ಈ ರಾಜ್ಯದಲ್ಲಿ ರೈತರಿಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪ ಮಾಡಿದರು.
ರೈತರ ಕಲ್ಯಾಣಕ್ಕಾಗಿ ಬಿಜೆಪಿ ಅವಧಿಯಲ್ಲಿ ಅನೇಕ ರೈತಪರವಾದ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದರೆ, ಕಾಂಗ್ರೆಸ್ ಸರಕಾರ ಎಲ್ಲವನ್ನು ನಿಲ್ಲಿಸಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ದೂರಿದರು.
ಪ್ರತಿಭಟನಾ ಸಭೆಯಲ್ಲಿ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ,ಬಂಟ್ವಾಳ ಮಂಡಲದ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ,
ಪ್ರಮುಖರಾದ ಸುಲೋಚನ ಜಿ.ಕೆ.ಭಟ್, ರಾಮ್ ದಾಸ ಬಂಟ್ವಾಳ, ಡೊಂಬಯ್ಯ ಅರಳ,ಹರಿಕೃಷ್ಣ ಬಂಟ್ವಾಳ, ಪ್ರಭಾಕರ್ ಪ್ರಭು, ಚೆನ್ನಪ್ಪ ಆರ್.ಕೋಟ್ಯಾನ್, ದಿನೇಶ್ ಅಮ್ಟೂರು, ಗಣೇಶ್ ರೈ, ಪುರುಷೋತ್ತಮ ಶೆಟ್ಟಿ, ಕಮಲಾಕ್ಷಿ ಕೆ.ಪೂಜಾರಿ,ಆನಂದ ಕೆ.ಶಂಭೂರು, ಮೋನಪ್ಪ ದೇವಶ್ಯ, ಗೋವಿಂದ ಪ್ರಭು, ಸಂತೋಷ್ ರಾಯಿಬೆಟ್ಟು,ವಸಂತ ,ಸದಾಶಿವ ಜಿ. ಸುಧಾಕರ ಶೆಟ್ಟಿ, ಚಿದಾನಂದ ರೈ , ಶರ್ಮಿತ್ ಜೈನ್, ಕಾರ್ತಿಕ್ ಬಲ್ಲಾಳ್, ಅಜಿತ್ ಶೆಟ್ಟಿ, ಪ್ರೇಮನಾಥ ಶೆಟ್ಟಿ , ದಿನೇಶ್ ದಂವೆದಾರ್, ಉಮೇಶ್ ಅರಳ, ವಸಂತ ಅಣ್ಣಳಿಕೆ, ರಾಧಕೃಷ್ಣ ತಂತ್ರಿ,ವಾಮನ ಆಚಾರ್ಯ, ಸುಮಿತ್ರಾ, ಭಾರತಿ ಚೌಟ, ಪಿ.ಎಸ್.ಮೋಹನ್, ತನಿಯಪ್ಪ ಗೌಡ, ಸುರೇಶ್ ಮೈರ, ಲಖಿತ ಆರ್ ಶೆಟ್ಟಿ, ರಾಜೇಶ್ ಬಾಳೆಕಲ್ಲು,,ವಿಶ್ವನಾಥ ಪೂಜಾರಿ ಕಟ್ಟತ್ತಿಲ,ಶಿವಪ್ಪ ಗೌಡ, ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು