ಇತ್ತೀಚಿನ ಸುದ್ದಿ
ಬಿ.ಸಿ.ರೋಡ್: ನ.22ರಂದು ರಾಜ್ಯ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನಾ ಕಾರ್ಯಕ್ರಮ
18/11/2023, 14:36

ಬಂಟ್ವಾಳ(reporterkarnataka.com): ಬಿಜೆಪಿ ಬಂಟ್ವಾಳ ವಿಧಾನಸಭೆ ಕ್ಷೇತ್ರ ವತಿಯಿಂದ ನಿಕಟಪೂರ್ವ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಬಿ.ಸಿ. ರೋಡ್ ನ ಸ್ಪರ್ಶ ಕಲಾ ಮಂದಿರದಲ್ಲಿ ನವೆಂಬರ್ 22ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಸಮಾರಂಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಸೇರಿದಂತೆ ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ.