6:40 AM Wednesday24 - December 2025
ಬ್ರೇಕಿಂಗ್ ನ್ಯೂಸ್
ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಇತ್ತೀಚಿನ ಸುದ್ದಿ

ಬಿ.ಸಿ. ರೋಡ್ ಉದ್ವಿಗ್ನ: 144 ಸೆಕ್ಷನ್ ಜಾರಿ?; ರ‍್ಯಾಪಿಡ್ ಅಕ್ಷನ್ ಪೋಸ್೯, ಕೆಎಸ್‌ಆರ್‌ಪಿ ತುಕಡಿ ಆಗಮನ; ಖಾಕಿ ಸರ್ಪಗಾವಲು

16/09/2024, 21:58

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಕೋಮು ಸಂಘರ್ಷದ ಭೀತಿಯ ಹಿನ್ನೆಲೆಯಲ್ಲಿ ಬಂಟ್ವಾಳದ ಬಿ.ಸಿ. ರೋಡ್ ಪೇಟೆಗೆ ಸೋಮವಾರ ರ‍್ಯಾಪಿಡ್ ಅಕ್ಷನ್ ಪೋಸ್೯ ಹಾಗೂ ಕೆಎಸ್‌ಆರ್‌ಪಿ ತುಕಡಿ ಆಗಮಿಸಿದ್ದು, ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ.





ಪುರಸಭೆ ಮಾಜಿ ಅಧ್ಯಕ್ಷರೊಬ್ಬರ ಸವಾಲನ್ನು ಸ್ವೀಕರಿಸಿ ವಿಹಿಂಪ ಪ್ರಾಂತ ಸಂಚಾಲಕ ಶರಣ್ ಪಂಪ್‌ವೆಲ್ ಅವರು ಬಿ.ಸಿ. ರೋಡಿಗೆ ಬಂದು ಸಂಘ ಪರಿವಾರ ಸಂಘಟನೆಯ ಕಾರ್ಯಕರ್ತರನ್ನುದ್ಧೇಶಿಸಿ ಮಾತನಾಡಿ ತೆರಳಿದ್ದರು. ಬಳಿಕ ಬಿ.ಸಿ. ರೋಡಿನ ಹೆದ್ದಾರಿಯಲ್ಲಿ ಮುಸ್ಲಿಂ ಯುವಕರು ಬೈಕ್, ಕಾರಿನಲ್ಲಿ ಧ್ವಜ ಹಿಡಿದು ಘೋಷಣೆ ಕೂಗಿ ಮೆರವಣಿಗೆ ನಡೆಸಿದರು. ಈ ಮಧ್ಯೆ ಹಿಂದೂ ಸಂಘಟನೆಯವರು ತಮಗೂ ರ್ಯಾಲಿ ನಡೆಸಲು ಅವಕಾಶ ನೀಡಬೇಕೆಂದು ಪಟ್ಟು ಹಿಡಿದು ಘೋಷಣೆ ಕೂಗಲಾರಂಭಿಸಿದರು.
ಈ ಸಂದರ್ಭ ಡಿವೈಎಸ್ಪಿ ವಿಜಯಪ್ರಸಾದ್, ಇನ್ಸ್‌ಪೆಕ್ಟರ್ ಅನಂತಪದ್ಮನಾಭ ಹಾಗೂ ಹಾಗೂ ಇತರೆ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಹಿಂದೂ ಕಾರ್ಯಕರ್ತರನ್ನು ಸಮಾಧಾನಪಡಿಸಿ ಬದಿಗೆ ಸರಿಸಿದರು. ಆಗ ಪೊಲೀಸ್ ಅಧಿಕಾರಿಗಳು ಮತ್ತು ಹಿಂದೂ ಕಾರ್ಯಕರ್ತರ ಮಧ್ಯೆ ವಾಗ್ವಾದವೇ ನಡೆಯಿತಲ್ಲದೆ ಪೊಲೀಸರ ಯಾವುದೇ ಮಾತನ್ನು ಕೇಳುವ ಸ್ಥಿತಿಯಲ್ಲಿ ಹಿಂದೂ ಕಾರ್ಯಕರ್ತರು ಇರಲಿಲ್ಲ. ಮೆರವಣಿಗೆಗೆ ಅವಕಾಶ ನೀಡುವುದಿಲ್ಲ ಎಂದು ವಾಗ್ದಾನ ಕೊಟ್ಟರೂ, ಬೈಕ್ ರ‍್ಯಾಲಿಗೆ ಅವಕಾಶ ನೀಡಿದವರು ಯಾರು? ಪೊಲೀಸರ ವೈಫಲ್ಯವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರಲ್ಲದೆ ರಸ್ತೆಯಲ್ಲಿ ಕುಳಿತು ಪ್ರತಿಭಟನೆಗೂ ಮುಂದಾದರು. ಇದರೊಂದಿಗೆ ಬಿ.ಸಿ.ರೋಡು ಪೇಟೆ ಎರಡನೇ ಬಾರಿಗೆ ಉದ್ವಿಗ್ನ ಪರಿಸ್ಥಿತಿಗೆ ತಿರುಗಿತು. ಮಾಹಿತಿ ಪಡೆದ ತಹಶೀಲ್ದಾರ್ ಆರ್ಚನಾ ಭಟ್ ಅವರು ಸ್ಥಳಕ್ಕೆ ಧಾವಿಸಿ ಬಂದು ಆಕ್ರೋಶಿತ ಕಾರ್ಯಕರ್ತರನ್ನು ಸಮಾಧಾನಪಡಿಸಿದರು.
ಆಗ ಯುವಕರು ತಮಗೂ ಮೆರವಣಿಗೆಗೆ ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದರು. ಪರಿಸ್ಥಿತಿ ಕೈ ಮೀರುವ ಸುಳಿವು ಸಿಕ್ಕಿದ ಪೊಲೀಸ್ ಅಧಿಕಾರಿಗಳು ಕೆಎಸ್‌ಆರ್‌ಪಿ., ರ‍್ಯಾಪಿಡ್ ಅಕ್ಷನ್ ಪೋಸ್೯, ಹೆಚ್ಚುವರಿ ಸಿಬ್ಬಂದಿಗಳನ್ನು ರಸ್ತೆಯುದ್ದಕ್ಕೂ ಸರ್ಪಗಾವಲು ಹಾಕಲಾಯಿತು.
ಡಿವೈಎಸ್ಪಿ ವಿಜಯಪ್ರಸಾದ್ ಹಾಗೂ ಪೊಲೀಸ್ ಇನ್ಸ್‌ಪೆಕ್ಟರ್ ಅನಂತಪದ್ಮನಾಭ ಅವರು ಸ್ಥಳದಲ್ಲಿದ್ದ ಹಿಂದೂ ಮುಖಂಡರಾದ ನರಸಿಂಹ ಮಾಣಿ, ರಾಮದಾಸ್ ಬಂಟ್ವಾಳ, ಪ್ರಶಾಂತ್ ಕೆಂಪುಗುಡ್ಡೆ ಅವರೊಂದಿಗೆ ಮಾತುಕತೆ ನಡೆಸಿ ಅವರ ಮೂಲಕ ಕಾರ್ಯಕರ್ತರನ್ನು ಸ್ಥಳದಿಂದ ಕಳಿಸಿಕೊಡುವಲ್ಲಿ ಯಶಸ್ವಿಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು