ಇತ್ತೀಚಿನ ಸುದ್ದಿ
ಬೀಚ್ ಸ್ವಚ್ಛತೆ ಯೊಂದಿಗೆ ಪ್ರವಾಸೋದ್ಯಮಕ್ಕೆ ಉತ್ತೇಜನ: ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್.
02/01/2023, 11:04

ಮಂಗಳೂರು(reporter Karnataka.com); ಕರಾವಳಿಯಲ್ಲಿ ಪ್ರವಾ ಸೋದ್ಯಮಕ್ಕೆ ವಿಫುಲ ಅವಕಾಶವಿದೆ. ಈ ನಿಟ್ಟಿನಲ್ಲಿ ಬೀಚ್ ಗಳ ಸ್ವಚ್ಛತೆ ಹಾಗೂ ಸೂಕ್ತ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಗೆ ಹೆಚ್ಚಿನ ಗಮನಹರಿಸಲಾಗುವುದು ಎಂದು ದ.ಕ.ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ,ಕ್ರೆಡೈ ಮಂಗಳೂರು, ಮತ್ತು ಶಕ್ತಿ ನಗರದ ಶಕ್ತಿ ಶಿಕ್ಷಣ ಸಮೂಹ ಸಂಸ್ಥೆ ಗಳ ಪಣಂಬೂರು ಬೀಚ್ ನಲ್ಲಿ ಸ್ವಚ್ಛ ಸುಂದರ ಬೀಚ್ ‘ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಪಶ್ಚಿಮ ಘಟ್ಟದ ತಪ್ಪಲಿನ ಪ್ರದೇಶ ಹಾಗೂ ನದಿ,ಕಡಲ ತೀರವನ್ನು ಹೊಂದಿದೆ. ತುಳುನಾಡಿನ ಸಮೃದ್ಧವಾದ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ. ಜಿಲ್ಲೆಯ ಬೀಚ್ ಗಳು ಹಾಗೂ ಇಲ್ಲಿನ ಪ್ರವಾಸಿ ತಾಣಗಳಿಗೆ ದೇಶ ವಿದೇಶದಿಂದ ಸಾಕಷ್ಟು ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಆದುದರಿಂದ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಇನ್ನಷ್ಟು ಹೂಡಿಕೆಗೆ ಸರ್ಕಾರ ಅವಕಾಶ ಕಲ್ಪಿಸುತ್ತಿದೆ. ಈ ನಿಟ್ಟಿನಲ್ಲಿ ಬೀಚ್ ಗಳ ಸಚ್ಛತೆಗಾಗಿ ಸಾಮೂಹಿಕ ಸಹಭಾಗಿತ್ವದಲ್ಲಿ ತೊಡಗಿಸಿ ಕೊಂಡಿರುವುದು ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಕ್ರೆಡೈ ಮಂಗಳೂರು ಇದರ ಅಧ್ಯಕ್ಷ ಪುಷ್ಪರಾಜ್ ಜೈನ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಸನಿಲ್, ಮುರುಗೇಶ್ (ಹಿರಿಯ ಪ್ರಬಂಧಕರು ಕೆಐಒಸಿಎಲ್ ಪಣಂಬೂರು)
ಲಕ್ಷ್ಮೀಶ ಭಂಡಾರಿ (ಪಾಲುದಾರರು,ಎಲ್ ಆರ್ ಎಸ್ ಬೀಚ್ ಟೂರಿಸಂ ಪಣಂಬೂ ರು.) ಡಾ.ರಾಜೇಶ್ ಹುಕ್ಕೇರಿ (ಪಾಲುದಾ ರರು,ಎಲ್ ಆರ್ ಎಸ್ ಬೀಚ್ ಟೂರಿಸಂ ಪಣಂಬೂರು)ಶಕ್ತಿ ಶಿಕ್ಷಣ ಸಮೂಹ ಸಂಸ್ಥೆ ಗಳ ಆಡಳಿತಾ ಧಿಕಾರಿ ರಮೇಶ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇ ಶ್ವರ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ,ಕಾರ್ಯ ಕಾರಿ ಸಮಿತಿ ಸದಸ್ಯ ರಾದ ರಾಜೇಶ್ ದಡ್ಡಂಗಡಿ, ಆರೀಫ್ ಪಡುಬಿದ್ರಿ, ಸುಖ್ ಪಾಲ್ ಪೊಳಲಿ, ರಾಷ್ಟ್ರೀಯ ಪತ್ರ ಕರ್ತರ ಒಕ್ಕೂಟದ ಕಾರ್ಯಕಾರಿ ಸಮಿತಿ ಸದಸ್ಯ ಪಿ.ಬಿ.ಹರೀಶ್ ರೈ,ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಇಬ್ರಾಹಿಂ ಅಡ್ಕಸ್ಥಳ, ಇನ್ನರ್ ವೀಲ್ ಮಂಗಳೂರು ನಾರ್ತ್ ನ ಅಧ್ಯಕ್ಷೆ ವಸಂತಿ ಕಾಮತ್ , ಕಾರ್ಯದರ್ಶಿ ಗೀತಾ ರೈ, ಮೊದಲಾದವರು ಭಾಗವಹಿಸಿದ್ದರು.