6:21 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಬೀದಿಬದಿ ವ್ಯಾಪಾರಸ್ಥರ ಸಂಘದಿಂದ ಮಹಾತ್ಮಾ ಗಾಂಧಿ ಜಯಂತಿ ಆಚರಣೆ: ಬಾವೂಜಿ ಸ್ಮರಣೆ

03/10/2023, 13:30

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮ ಜಯಂತಿಯು ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ರಾಷ್ಟ್ರಪಿತ ಬಾಪೂಜಿಯವರನ್ನು ಸ್ಮರಿಸಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಸಂಘದ ಗೌರಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಅವರು ಮಾತನಾಡಿ, ಮಹಾತ್ಮ ಗಾಂಧೀಜಿ ಇಲ್ಲದ ಭಾರತವನ್ನು ಊಹಿಸಲು ಸಾಧ್ಯವಿಲ್ಲ. ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಗಾಂಧೀಜಿಯವರ ಅಹಿಂಸಾತ್ಮಕ ಹಾದಿಯಲ್ಲಿ ಎಂಥಹ ಬಲಾಡ್ಯರನ್ನು ಸೋಲಿಸಬಹುದು ಎಂದು ಜಗತ್ತಿಗೆ ತೋರಿಸಿಕೊಟ್ಟರು. ಸ್ವತಂತ್ರ ಭಾರತದಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆಗಾಗಿ ಹೋರಾಡಿದರು. ಗಾಂಧೀಜಿ ಯವರ ಸದ್ಭಾವನೆಯ ಚಿಂತನೆ ಎಲ್ಲ ಭಾರತೀಯರು ಮೈಗೂಡಿಸಿಕೊಳ್ಳಬೇಕು ಎಂದು ಅವರು ನುಡಿದರು.
ಡಿವೈಎಫ್ಐ ನಗರ ಅಧ್ಯಕ್ಷ ಜಗದೀಶ್ ಬಜಾಲ್, ಸಂಘದ ಅಧ್ಯಕ್ಷ ಮೊಹಮ್ಮದ್ ಮುಸ್ತಫಾ, ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ, ಉಪಾಧ್ಯಕ್ಷ ನೌಶಾದ್ ಉಳ್ಳಾಲ, ಮುಖಂಡರಾದ ಆಸೀಫ್ ಬಾವ ಉರುಮನೆ, ರೂಪೇಶ್, ಹನೀಫ್ ಸುರಲ್ಪಾಡಿ, ಮೇಬಲ್ ಡಿಸೋಜಾ,ರಿಯಾಜ್ ಎಲ್ಯರ್ ಪದವು, ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು