2:00 PM Sunday6 - October 2024
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಸಹೋದರ ದಿಢೀರ್ ನಾಪತ್ತೆ; ಕೂಳೂರು ಸೇತುವೆಯಲ್ಲಿ ಕಾರು ಪತ್ತೆ; ಆತ್ಮಹತ್ಯೆ… ಮಂಗಳೂರು-ಪೊಳಲಿಗೆ ಬೆಂಜನಪದವು- ಕಲ್ಪನೆ ಮಾರ್ಗವಾಗಿ ಕೆಎಸ್‌ಆರ್‌ಟಿಸಿ ಬಸ್ ಆರಂಭ ಕೋಲಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕ್ಟೋಬರ್ 7 ರಿಂದ ಇ-ಖಾತಾ ಲಭ್ಯ ಬೆಂಗಳೂರು: ಹೃದಯವಾಹಿನಿ ರಜತ ಮಹೋತ್ಸವ, ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ… ಕೊಟ್ಟಿಗೆಹಾರ: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು ಗಾಂಧೀಜಿ ಚಿಂತನೆಗಳು ಎಲ್ಲಾ ಪತ್ರಕರ್ತರಿಗೆ ಎಂದೆಂದಿಗೂ ಮಾರ್ಗದರ್ಶಿ: ಮಂಗಳೂರು ಬಿಷಪ್ ಡಾ. ಪೀಟರ್… ಸಾಲ ಕೇಳ್ತಾ ಇಲ್ಲ, ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಿ: ಪ್ರತಿಭಟನಾ ಸಭೆಯಲ್ಲಿ ರಾಜ್ಯ… ಈಚರ್ ಲಾರಿ – ಬೈಕ್ ಮಧ್ಯೆ ಭೀಕರ ಅಪಘಾತ: ಮೂವರು ಮಕ್ಕಳು ಸಹಿತ… ಬೈಕ್ ಗೆ ಗುದ್ದಿದ ಕಾಡುಕೋಣ: ರಸ್ತೆಗೆ ಬಿದ್ದು ಸವಾರನಿಗೆ ಗಾಯ

ಇತ್ತೀಚಿನ ಸುದ್ದಿ

ಬೀದಿ ನಾಯಿಗಳ ಸಂಖ್ಯೆ ನಿಯಂತ್ರಣಕ್ಕೆ ಸಂತಾನಹರಣ ಶಸ್ತ್ರಚಿಕಿತ್ಸೆ ಉತ್ತಮ ವಿಧಾನ: ಪುತ್ತೂರು ಶಾಸಕ ಅಶೋಕ್ ರೈ

10/07/2024, 16:42

ಪುತ್ತೂರು(reporterkarnataka.com): ಬೀದಿ ನಾಯಿಗಳನ್ನು ಕೊಲ್ಲುವುದು ಕಾನೂನಿಗೆ ವಿರುದ್ದವಾಗಿದ್ದು, ಅವುಗಳ ನಿಯಂತ್ರಣ ಕೆಲಸ ನಡೆಯುತ್ತಿರುವುದು ಉತ್ತಮ ಕಾರ್ಯವಾಗಿದೆ. ಸಂತಾನ ಹರಣದಿಂದ ಬೀದಿ ನಾಯಿಗಳ ಸಂಖ್ಯೆ ಕಡಿಮೆಯಾಗುತ್ತದೆ. ಸಮಾಜದ ಎಲ್ಲಾ ಸ್ತರದಲ್ಲೂ ಕೆಲಸಗಳು ನಡೆಯಬೇಕು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಮಂಗಳವಾರ ಪೋಳ್ಯದಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ, ವರ್ಲ್ಡ್ ವೈಡ್ ವೆಟರ್ನರಿ ಸರ್ವಿಸ್ ಹಾಗೂ ಮಲ್ಪೆ ಮದ್ವರಾಜ್ ಅನಿಮಲ್ ಕೇರ್ ಟ್ರಸ್ಟ್ ವತಿಯಿಂದ ನಡೆದ ಮನೆ ನಾಯಿಗಳಿಗೆ ಉಚಿತವಾಗಿ ಸಂತಾನಹರಣ ಚಿಕಿತ್ಸೆ ಸೌಲಭ್ಯದಲ್ಲಿ ಭಾಗವಹಿಸಿ ಮಾತನಾಡಿದರು.

ಮುಳಿಯ ಜ್ಯುವೆಲ್ಸ್ ನ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಮಾತನಾಡಿ ಅಪಘಾತಕ್ಕೊಳಗಾದ ನಾಯಿಗಳಿಗೆ ತುರ್ತು ಚಿಕಿತ್ಸೆ ನೀಡುವ ಜತೆಗೆ ಆರೋಗ್ಯ ಸರಿಯಿಲ್ಲದ ನಾಯಿಗಳ ಆರೈಕೆ ಮಾಡುವ ಕೇಂದ್ರದ ಸ್ಥಾಪನೆಯ ಯೋಚನೆಯನ್ನು ಹಾಕಿಕೊಳ್ಳಲಾಗಿದೆ. ಸಂತಾನ ಹರಣ ಚಿಕಿತ್ಸೆಯ ಬಳಿಕ ಅವುಗಳ ಪಾಲನೆಯ ಜವಾಬ್ದಾರಿಯನ್ನು ತೆಗೆದುಕೊಳ್ಳುವ ಮೂಲಕ ಬೀದಿ ನಾಯಿಗಳ ಸಂಖ್ಯೆ ಕಡಿಮೆ ಮಾಡುವ ಕಾರ್ಯ ನಡೆಯುತ್ತದೆ ಎಂದು ತಿಳಿಸಿದರು.
125ಕ್ಕೂ ಅಧಿಕ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ನೀಡಲಾಯಿತು. ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವಿನಿ ಕೃಷ್ಣ ಮುಳಿಯ, ಮಲ್ಪೆ ಮದ್ವರಾಜ್ ಅನಿಮಲ್ ಕೇರ್ ಟ್ರಸ್ಟ್ ಮುಖ್ಯಸ್ಥೆ ಮಮತಾ ರಾವ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು