5:38 PM Saturday17 - January 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ…

ಇತ್ತೀಚಿನ ಸುದ್ದಿ

ಬೇಳ ಗ್ರಾಮದಲ್ಲಿ ’ಗ್ರಾಮಲೋಕ’ ವಿಭಿನ್ನ ಸಾಹಿತ್ಯ ಕಾರ್ಯಕ್ರಮ

22/05/2024, 22:02

ಬದಿಯಡ್ಕ(reporterkarnataka.com):ಸಾಹಿತ್ಯ ಅಕಾಡೆಮಿ, ನವದೆಹಲಿ ಹಾಗೂ ಕೊಂಕಣಿ ಬರಹಗಾರ ಹಾಗೂ ಕಲಾವಿದರ ಒಕ್ಕೂಟ ಮಂಗಳೂರು ಇದರ ಜಂಟಿ ಆಶ್ರದಲ್ಲಿ ಬದಿಯಡ್ಕ ಪಂಚಾಯತಿನ ಬೇಳ ಗ್ರಾಮದಲ್ಲಿ ’ಗ್ರಾಮಲೋಕ’ ವಿಭಿನ್ನ ಸಾಹಿತ್ಯ ಕಾರ್ಯಕ್ರಮ ನಡೆಯಿತು.


ಯುವ ಬರಹಗಾರರು ಹಾಗೂ ನಾಟಕ, ಟಿವಿ ಧಾರಾವಾಹಿ ನಿರ್ದೇಶಕರಾದ ಸ್ಟ್ಯಾನಿ ಬೇಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಅಕಾಡೆಮಿ ಕೊಂಕಣಿ ವಿಭಾಗದ ಸಂಯೋಜಕರಾದ ಮೆಲ್ವಿನ್ ರೊಡ್ರಿಗಸ್, ಸಾಹಿತ್ಯ ಅಕಾಡೆಮಿಯ ಇತಿಹಾಸ ಹಾಗೂ ಕಾರ್ಯಕ್ರಮಗಳ ವಿವರಣೆ ನೀಡಿದರು. ಯುವ ಸಾಹಿತಿಗಳಾದ ರಾಜು ಉಕ್ಕಿನಡ್ಕ, ರವಿ ಕುಮಾರ್ ಕ್ರಾಸ್ತ, ಪರಿಸರ ಹೋರಾಟಗಾರರಾದ ರಾಜು ಕಿದೂರು ಹಾಗೂ ವಾಣಿ ಕ್ರಾಸ್ತ ಸ್ವರಚಿತ ಕವನಗಳನ್ನು ವಾಚಿಸುವುದರೊಂದಿಗೆ ಪರಿಸರ, ಭಾಷೆ ಹಾಗೂ ಸಂಸ್ಕೃತಿಯ ಕುರಿತು ತಮ್ಮ ವಿಚಾರಗಳನ್ನು ಮಂಡಿಸಿದರು. ಕವಿತಾ ಟ್ರಸ್ಟ್ ಸದಸ್ಯರಾದ ವಿನ್ಸೆಂಟ್ ಪಿಂಟೊ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು