12:39 AM Wednesday12 - November 2025
ಬ್ರೇಕಿಂಗ್ ನ್ಯೂಸ್
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಇತ್ತೀಚಿನ ಸುದ್ದಿ

ಬೆಳಗಾವಿ ಅಧಿವೇಶನ: ವಿವಿಧ ಬೇಡಿಕೆ ಆಗ್ರಹಿಸಿ ಇಂದು ಪತ್ರಕರ್ತರ ಧ್ವನಿಯಿಂದ ಧರಣಿ

27/12/2022, 09:30

ರಾಯಚೂರು(reporterkarnataka.com):ಪತ್ರಕರ್ತರ ಕೌಟುಂಬಿಕ ಭದ್ರತೆಯ ಸಮಸ್ಯೆಗಳಾದ ವಿಮೆ, ಗೌರವಧನ, ಉಚಿತ ಬಸ್ ಪಾಸ್ ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 27ರಂದು ಬೆಳಗಾವಿ ಅಧಿವೇಶನದಲ್ಲಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಮಸ್ಕಿ ತಾಲೂಕು ಅಧ್ಯಕ್ಷ ವಿರುಪಾಕ್ಷಯ್ಯ ಸ್ವಾಮಿ ಮಠ ಅಂತರಗಂಗೆ ಹೇಳಿದರು.

ಅವರು ಮಸ್ಕಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಲಾಗಿದ್ದ ಸಭೆಯಲ್ಲಿ ಮಾತನಾಡಿದ ಅವರು, ಪತ್ರಕರ್ತರು ವಿತರಕರು ಛಾಯಾಗ್ರಹಕರು ಎಲೆಕ್ಟ್ರಾನಿಕ್ ಮಾಧ್ಯಮದವರು ಸೇರಿದಂತೆ ಮತ್ತಿತರರು ದಿನಂಪ್ರತಿ ಪತ್ರಿಕೆ ರಂಗದಲ್ಲಿ ಕೆಲಸ ಮಾಡುತ್ತಿದ್ದು ಅವರ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕೆಂದು ಧರಣಿಯಲ್ಲಿ ಒತ್ತಾಯಿಸಲಾಗುವುದು. ಆದ್ದರಿಂದ ಜಿಲ್ಲೆಯ ಎಲ್ಲಾ ತಾಲೂಕಿನ ನನ್ನ ಆತ್ಮೀಯ ಸ್ನೇಹಿತರು ಪತ್ರಕರ್ತರು ಧರಣಿಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಯಚೂರು ಜಿಲ್ಲಾ ಕಾರ್ಯದರ್ಶಿ ವಿರುಪಾಕ್ಷಗೌಡ ತಾಲೂಕು ಅಧ್ಯಕ್ಷರಾದ ವಿರೂಪಾಕ್ಷಯ್ಯ ಸ್ವಾಮಿಗಳು, ಹಟ್ಟಿ ಹೋಬಳಿ ಅಧ್ಯಕ್ಷರಾದ ಶ್ರೀನಿವಾಸ್ ಮಧುಶ್ರೀ, ಮಸ್ಕಿ ತಾಲೂಕು ಗೌರವಾಧ್ಯಕ್ಷರು ಮಾಂತೇಶ್ ಪಟ್ಟಣಶೆಟ್ಟಿ, ಹಟ್ಟಿ ಪಟ್ಟಣದ ವಿಘ್ನೇಶ್ ಹಿರೇ ನಗನೂರು ಮತ್ತಿತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು