ಇತ್ತೀಚಿನ ಸುದ್ದಿ
ಬೆಳಗಾವಿ ಭಾಗದ ಕೈಗಾರಿಕೆಗಳು ಮಹಾರಾಷ್ಟ್ರಕ್ಕೆ ವಲಸೆ ಹೋಗದು: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ವಿಶ್ವಾಸ
15/06/2023, 10:18
ರಾಹುಲ್ ಅಥಣಿ ಬೆಳಗಾವಿ
info.eporterkarnataka@gmail.com
ಕರ್ನಾಟಕದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲೇ ವಿದ್ಯುತ್ ಸಮಸ್ಯೆ ಇದೆ. ಬೆಲೆ ಏರಿಕೆಯ ಸಮಸ್ಯೆ ತಾತ್ಕಾಲಿಕ. ಅದನ್ನು ಪರಿಹರಿಸಲಾಗುವುದು.
ರಾಜ್ಯದ ಬೆಳಗಾವಿ ಭಾಗದ ಕೈಗಾರಿಕೆಗಳು ಮಹಾರಾಷ್ಟ್ರಕ್ಕೆ ವಲಸೆ ಹೋಗುವ ಸಾಧ್ಯತೆಯನ್ನು ಕಡಿಮೆಯಾಗಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭರವಸೆ ವ್ಯಕ್ತಪಡಿಸಿದರು.
ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಎದುರು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಾರಕಿಹೊಳಿ, ಬೆಳಗಾವಿ ಹಾಗೂ ಉತ್ತರ ಕರ್ನಾಟಕದಲ್ಲಿ ಮಳೆ ವಿಳಂಬವಾಗಿ ನೀರಿನ ಸಮಸ್ಯೆ ತಲೆದೋರಿರುವ ಹಿನ್ನಲೆಯಲ್ಲಿ ಮಹಾರಾಷ್ಟ್ರದಿಂದ ಹೆಚ್ಚಿನ ನೀರು ಕೇಳಬೇಕೆ ಎಂಬ ಪ್ರಶ್ನೆಗೆ ಉದ್ಬವಿಸುವುದಿಲ್ಲ ಎನಿಸುತ್ತದೆ. ಏಕೆಂದರೆ ಮುಂದಿನ ವಾರದಲ್ಲಿ ಮಳೆ ಪ್ರಾರಂಭವಾಗುವ ನಿರೀಕ್ಷೆಯಿದೆ. ಆ ನಂತರ ನೀರಿನ ಸಮಸ್ಯೆ ಕಡಿಮೆಯಾಗಲಿದೆ ಎಂದು ಹೇಳಿದರು.
ಹೆಚ್ಚಿದ ವಿದ್ಯುತ್ ಬಿಲ್ ನ್ನು ಯಾವ ಆಧಾರದಲ್ಲಿ ನೀಡಲಾಗುತ್ತಿದೆ ಎಂಬುದನ್ನೂ ಆಧರಿಸಿ ಮಾತನಾಡುತ್ತೇನೆ. ರಾಜ್ಯದಲ್ಲಿ ವಿದ್ಯುತ್ ಸರಬರಾಜು ಮಂಡಳಿಗಳು ವಿದ್ಯುತ್ ಬಿಲ್ ಹೆಚ್ಚಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಯಾವ ಆಧಾರದಲ್ಲಿ ಬಿಲ್ ಗಳನ್ನು ಎರಡು-ಮೂರು ಪಟ್ಟು ಹೆಚ್ಚಿಸುತ್ತಿದ್ದಾರೆ ಎಂಬುದು ನಮಗೆ ನಿಖರವಾಗಿ ತಿಳಿದಿಲ್ಲ. ವಿದ್ಯುತ್ ಬೆಲೆ ಏರಿಕೆ ನಿಯಮಿತ ಪ್ರಕ್ರಿಯೆ. ವಿದ್ಯುತ್ ನಿಯಂತ್ರಣ ಆಯೋಗವು ಏಪ್ರಿಲ್ ನಲ್ಲಿ ಹೆಚ್ಚಳಕ್ಕೆ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ. ಬಹುಶಃ ಚುನಾವಣೆಯ ಕಾರಣದಿಂದ ದರ ಏರಿಕೆ ತಕ್ಷಣಕ್ಕೆ ಜಾರಿಯಾಗಿರಲಿಲ್ಲ ಎಂದು ಅವರು ನುಡಿದರು.
ಸ್ತ್ರೀ ಶಕ್ತಿ ಯೋಜನೆಯಿಂದ ಸಾರಿಗೆ ಮಂಡಳಿಗಳು ಪ್ರಯೋಜನ ಪಡೆಯಲಿವೆ. ಸ್ತ್ರೀ ಶಕ್ತಿ ಯೋಜನೆಯಿಂದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸಲಾಗಿದೆ. ಯೋಜನೆಯನ್ನು ಸರಿಯಾಗಿ ಯೋಜಿಸಲಾಗಿದೆ. ಈ ಯೋಜನೆಯಿಂದ ರಾಜ್ಯದ ಸಾರಿಗೆ ಮಂಡಳಿಗಳಿಗೆ ಲಾಭವಾಗಲಿದೆ ಎಂದು ನಂಬಲಾಗಿದೆ. ಹೀಗಾದರೆ ಸಾರಿಗೆ ಮಂಡಳಿಗಳ ಸ್ಥಿತಿ ಸುಧಾರಿಸಿ ನೌಕರರ ವೇತನವನ್ನೂ ಹೆಚ್ಚಿಸಬಹುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ನಗರ ಪೊಲೀಸ್ ಆಯುಕ್ತ ಬೋರಲಿಂಗಯ್ಯ ಮೊದಲಾದವರು ಉಪಸ್ಥಿತರಿದ್ದರು.














