ಇತ್ತೀಚಿನ ಸುದ್ದಿ
ಬೆಳಗಾವಿ ಅಧಿವೇಶನ: ನಂದಿಕೂರು – ಕಾಸರಗೋಡು ವಿದ್ಯುತ್ ಲೈನ್ ಅವೈಜ್ಞಾನಿಕ ಕಾಮಗಾರಿ ಕುರಿತು ಮಂಜನಾಥ ಭಂಡಾರಿ ಪ್ರಸ್ತಾಪ
12/12/2024, 19:21
ಬೆಂಗಳೂರು(reporterkarnataka.com): ನಂದಿಕೂರು – ಕಾಸರಗೋಡು ವಿದ್ಯುತ್ ಲೈನ್ ಕಾಮಗಾರಿಯ ಅವೈಜ್ಞಾನಿಕ ಯೋಜನೆ ಕುರಿತಂತೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಸದನದಲ್ಲಿ ಪ್ರಸ್ತಾಪ ಮಾಡಿದರು.
ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಶೂನ್ಯ ವೇಳೆಯಲ್ಲಿ ಈ ಕುರಿತು ಪ್ರಸ್ತಾಪ ಮಾಡಿದ ಅವರು, ಯೋಜನೆಯಿಂದ ರೈತರಿಗೆ ಆಗುವ ಅನಾನುಕೂಲವನ್ನು ವಿವರಿಸಿದರು. ಕೂಡಲೇ ಟವರ್ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸಿ ವೈಜ್ಞಾನಿಕವಾಗಿ ನೆಲದಡಿಯಲ್ಲಿ ವಿದ್ಯುತ್ ಲೈನ್ ನಿರ್ಮಾಣ ಮಾಡುವ ಕುರಿತಂತೆ ಅವರು ಇಂಧನ ಸಚಿವರನ್ನು ಒತ್ತಾಯಿಸಿದರು.