9:03 PM Monday23 - September 2024
ಬ್ರೇಕಿಂಗ್ ನ್ಯೂಸ್
2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬಾಲಕಿಯರ ಕ್ರೀಡಾ ವಸತಿ ನಿಲಯ ಕಟ್ಟಡ ಉದ್ಘಾಟನೆ ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ

ಇತ್ತೀಚಿನ ಸುದ್ದಿ

ಬೆಳಗಾವಿ: ಬೋರ್ ವೆಲ್ ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು; ಕೊಳವೆ ಬಾವಿ ಮುಚ್ಚದೆ ಮಾಡಿದ ಎಡವಟ್ಟು 

19/09/2021, 09:10

ಬೆಳಗಾವಿ(reporterkarnataka.com) :  ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಅಲಖನೂರು ಗ್ರಾಮದಲ್ಲಿ ಎರಡೂವರೆ ವರ್ಷದ ಮಗುವೊಂದು ತೆರೆದ ಬೋರ್ ವೆಲ್ ಗೆ ಬಿದ್ದ ಘಟನೆ ನಡೆದಿದ್ದು, ಮಗುವಿನ ಶವ ಪತ್ತೆಯಾಗಿದೆ.

ಕೊಳವೆ ಬಾವಿಗೆ ಬಿದ್ದಂತಹ ಬಾಲಕ ಶರತ್ ಮೃತದೇಹ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಮಗು ಶರತ್  15 ಅಡಿ ಆಳದ ಬೋರ್ ವೆಲ್ ನಲ್ಲಿ ಬಿದ್ದಿದ್ದು, ಬಾಲಕನನ್ನು ಸುರಕ್ಷಿತವಾಗಿ ಹೊರಕ್ಕೆ ತೆಗೆಯಲು ಕಾರ್ಯಾಚರಣೆ ನಡೆಸಲಾಗಿತ್ತು.

ಆದರೆ ಕೊಳವೆ ಬಾವಿಗೆ ಬಿದ್ದ ಮಗು ಶವವಾಗಿ ಪತ್ತೆಯಾಗಿದೆ.

ಅಲಖನೂರ ಗ್ರಾಮದಲ್ಲಿ ನಿನ್ನೆಯ ದಿನ  ಮಗು ಶರತ್ ಕಾಣೆಯಾಗಿದ್ದ. ಹಾಲಪ್ಪ ಎಂಬುವವರ ತೋಟದ ನಿವಾಸದಲ್ಲಿ ಆಡುತ್ತಿದ್ದಾಗ ಬಾಲಕ ಕಾಣೆಯಾಗಿದ್ದನು. ಈ ಕುರಿತು ಹಾರೂಗೇರಿ ಠಾಣೆಯಲ್ಲಿ ಪೋಷಕರು ದೂರು ದಾಖಲಿಸಿದ್ದರು. ನಂತರ ಹೊಲದಲ್ಲಿ ಬೋರ್ ವೆಲ್ ಬಾಲಕ ಬಿದ್ದಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ನಂತರ ರಕ್ಷಣಾ ಕಾರ್ಯ ಆರಂಭವಾಗಿದ್ದು, 15 ಅಡಿ ಆಳದಲ್ಲಿ ಸಿಲುಕಿರುವ ಕಂದಮ್ಮನ ರಕ್ಷಣೆಗೆ ಅಗ್ನಿಶಾಮಕ ದಳ, ಎನ್ ಡಿ ಆರ್ ಎಫ್ ಸಿಬ್ಬಂದಿ ಧಾವಿಸಿತ್ತು, ಆದರೆ ಕೊಳವೆ ಬಾವಿಗೆ ಬಿದ್ದ ಮಗು ಶವವಾಗಿ ಪತ್ತೆಯಾಗಿದೆ.

ಆರು ತಿಂಗಳ ಹಿಂದೆಯಷ್ಟೇ ಜಮೀನಿನಲ್ಲಿ ಬೋರ್ವೆಲ್ ಕೊರೆಸಲಾಗಿತ್ತು, ಆದರೆ ನೀರು ಸಿಗದ ಕಾರಣ ಬೋರ್ವೆಲ್ ಮುಚ್ಚದೆ ಹಾಗೆಯೇ ಬಿಡಲಾಗಿತ್ತು, ಬೋರ್ವೆಲ್ ಮುಚ್ಚದ ಹಿನ್ನೆಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು