1:13 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Belagavi | ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಿ; ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಎಸಿಎಸ್ ವಿ.ರಶ‍್ಮಿ ಮಹೇಶ ಕಿವಿಮಾತು

16/12/2025, 11:42

ಕಿತ್ತೂರ,ಬೆಳಗಾವಿ(reporterkarnataka.com): ವಿದ್ಯಾರ್ಥಿಗಳು ಪ್ರಶ‍್ನೆಗಳನ್ನು ಕೇಳುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಯಾವುದೇ ಹಿಂಜರಿಕೆ ಇಲ್ಲದೇ ಅನುಮಾನಗಳಿಗೆ ಪ್ರಶ್ನೆಗಳನ್ನು ಕೇಳಿ ತಮ್ಮಲ್ಲಿರುವ ಆತಂಕಗಳನ್ನು ಸರಿಪಡಿಸಿಕೊಳ್ಳಬೇಕೆಂದು ಶಿಕ್ಷಣ ಇಲಾಖೆಯ ಎಸಿಎಸ್ ವಿ ರಶ‍್ಮಿ ಮಹೇಶ್ ಕಿವಿಮಾತು ಹೇಳಿದರು.
ಅವರು ಬೆಳಗಾವಿ ಜಿಲ್ಲೆಯ ಚನ್ನಮ್ಮ ಕಿತ್ತೂರಿನ ಕಿತ್ತೂರ ರಾಣಿ ಚೆನ್ನಮ್ಮ ಸೈನಿಕ ಶಾಲೆಯ 54ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ತಂತ್ರಜ್ಞಾನ ಯುಗದಲ್ಲಿ ನಾವಿದ್ದೇವೆ. ಸಾಕಷ್ಟು ಮಾಹಿತಿಗಳನ್ನು ನಾವು ಅಂತರಜಾಲ್ ದಲ್ಲಿ ಹುಡುಕಾಡಬಹುದು ಅವುಗಳನ್ನು ಯಾವುದು ನಮ್ಮ ಅನುಕೂಲಕ್ಕ ಬರುತ್ತದೆಯೊ ಅದನ್ನು ಮಾತ್ರ ಓದಿಗೆ ಪೂರಕವಾಗಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು.
ವಿದ್ಯಾರ್ಥಿಗಳು ಪೋಷಕರು ಹಾಗೂ ಶಿಕ್ಷಕರ ಮಾರ್ಗದರ್ಶನದಲ್ಲಿ ಅತ್ಯುತ್ತಮ ಶಿಕ್ಷಣ ಪಡೆದುಕೊಂಡು ಉತ್ತಮವಾದ ಬದುಕನ್ನು ಸೃಷ್ಟಿಸಿಕೊಳ್ಳಬೇಕು ಎಂದರು.
ವಿದ್ಯಾರ್ಥಿಗಳು ಈಗ ಕಲಿಯಲು ಸಾಕಷ್ಟು ಅವಕಾಶಗಳಿಗೆ ಅವುಗಳ ಸದುಪಯೋಗ ಪಡೆದುಕೊಳ್ಳಬೇಕು. ಬದುಕಿನಲ್ಲಿ ಉತ್ತಮವಾದ ಮತ್ತು ದೊಡ್ಡದಾದ ಗುರಿಯನ್ನು ಇಟ್ಟುಕೊಳ್ಳಬೇಕು ಮತ್ತು ಸತತ ಶ್ರಮವಹಿಸಿ ಸಾಧಕರಾಗಬೇಕೆಂದು ನುಡಿದರು.
ಈ ಸಮಾರಂಭದಲ್ಲಿ ಅತ್ಯುತ್ತಮವಾದ ಸಾಧನೆಮಾಡಿದ ಶಿಕ್ಷಕಿಯರಿಗೆ ಮತ್ತು ಸಿಬ್ಬಂದಿವರ್ಗದವರಿಗೆ ಹಾಗೂ ವಿವಿಧ ಕ್ರೀಡೆಗಳಲ್ಲಿ ಪದಕ ಪಡೆದ ವಿದ್ಯಾರ್ಥಿನಿಯರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.
ವೇದಿಕೆಯ ಸಮಾರಂಭದ ಮುಂಚೆ ಸಭೆಗೆ ಆಗಮಿಸಿದ್ದ ಮುಖ್ಯ ಅತಿಥಿಗಳು ಶಾಲಾ ವಿದ್ಯಾರ್ಥಿವೃಂದದಿಂದ ಪಥಸಂಚಲನ ಗೌರವ ವಂದನೆ ಸ್ವೀಕರಿಸಿದರು.


ಪಥಸಂಚನಲದ ನಂತರ ವಿದ್ಯಾರ್ಥೀನಿಯರುಗಳು ವಿವಿಧ ಪ್ರಕಾರದ ಶೌರ್ಯ, ಕಲೆ, ಸಂಸ್ಕೃತಿ, ಮತ್ತು ಯೋಗ, ಮಲ್ಲಕಂಬ ಹೀಗೆ ಹತ್ತು ಹಲವಾರು ಪ್ರದರ್ಶನಗಳನ್ನು ನೀಡಿ ಅತಿಥಿಗಳ ಮತ್ತು ಪಾಲಕರ ಮೆಚ್ಚುಗೆ ಪಡೆದುಕೊಂಡರು.
ಪ್ರಾಚಾರ್ಯರಾದ ಕರ್ನಲ್ ಡಾ.ರಾಹುಲ್ ಶರ್ಮಾ ಸ್ವಾಗತಿಸಿದರು. ಸಂಸ್ಥೆಯ ಅಧ್ಯಕ್ಷ ಎ.ಕೆ.ಕೊಟ್ರಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಅರುಣಾ ಅಕ್ಕಿ, ಕಾರ್ಯಾಧ‍್ಯಕ್ಷ ಡಾ.ವಿರೇಂದ್ರ ತೆಗ್ಗಿನಮನೆ, ಸದಸ್ಯ ಕಾರ್ಯದರ್ಶಿ ಹಾಗೂ ಶಾಸಕರಾದ ಮಹಾಂತೇಶ ಕೌಜಲಗಿ, ಶಿಕ್ಷಣ ಇಲಾಖೆ ಆಯುಕ್ತ ಈಶ್ವರ ಉಳ್ಳಾಗಡ್ಡಿ, ಆಯುಕ್ತೆ ಶಾಲಿನಿ, ಶಾಲೆಯ ಕ್ಯಾಪ್ಟನ್ ಕೆಡೆಟ್ ಅಪೂರ್ವ ಎನ್ ಡಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು