ಇತ್ತೀಚಿನ ಸುದ್ದಿ
Belagavi | ಅಥಣಿಯಲ್ಲಿ ರೋಟರಿ ಉದ್ಯಾನವನ ಉದ್ಘಾಟನೆ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಚಾಲನೆ
04/01/2026, 11:20
ಬೆಳಗಾವಿ(reporterkarnataka.com): ಅಥಣಿ ಪಟ್ಟಣದ ಅಬ್ಬಿಹಾಳ ರಸ್ತೆಯಲ್ಲಿರುವ ಶ್ರೀ ಜ್ಯೋತಿಬಾ ದೇವಸ್ಥಾನದಲ್ಲಿ ರೋಟರಿ ಸಂಸ್ಥೆಯಿಂದ ಆಯೋಜಿಸಿದ್ದ ರೋಟರಿ ಉದ್ಯಾನವನವನ್ನು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಉದ್ಘಾಟಿಸಿದರು.
ಕೆಪಿಸಿಸಿ ಪ.ಜಾ. ರಾಜ್ಯ ಕಾಂಗ್ರೆಸ್ ಕಾರ್ಯಕಾರಿಣಿ ಸದಸ್ಯರು, ಕೆಪಿಸಿಸಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಪ.ಜಾ. ಮಾಧ್ಯಮ ವಕ್ತಾರರು, ಅಥಣಿ ಪುರಸಭೆಯ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರು, ಉದ್ಯಮಿಗಳು, ಸಮಾಜ ಸೇವಕರಾದ ರಾವಸಾಬ ನಿ. ಐಹೊಳೆ ಅವರು ಪಾಲ್ಗೊಂಡು ಮಾತನಾಡಿದರು.
ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಶೆಟ್ಟರಮಠದ ಶ್ರೀ ಮರುಳಸಿದ್ದ ಸ್ವಾಮೀಜಿ, ಮಾಜಿ ಶಾಸಕ ಶಹಾಜಹಾನ್ ಡೊಂಗರಗಾಂವ,ಮಹೇಶ ಕುಮಠಳ್ಳಿ, ಕಾಂಗ್ರೆಸ್ ಮುಖಂಡರಾದ ಗಜಾನನ ಮಂಗಸೂಳಿ, ರಮೇಶ ಸಿಂದಗಿ, ದಿಗ್ವಿಜಯಪವಾರ ದೇಸಾಯಿ, ಅಸ್ಲಂ ನಾಲಬಂದ, ಬಸವರಾಜ ಬುಟಾಳಿ, ಆನಂದ ಟೊಣಪಿ ಸೇರಿದಂತೆ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಅಥಣಿ ತಾಲೂಕಿನ ಶಿನಾಳ್ ಗ್ರಾಮದಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಮಂಜೂರಾತಿ ದೊರೆತಿರುವ ಹಿನ್ನೆಲೆಯಲ್ಲಿ, ನಿರ್ಮಾಣಗೊಳ್ಳಲಿರುವ ಶಾಲಾ ಕಟ್ಟಡದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.








ನಂತರ ನೂತನ ಕಟ್ಟಡ ನಿರ್ಮಾಣ ಪೂರ್ಣಗೊಳ್ಳುವವರೆಗೆ ತಾತ್ಕಾಲಿಕವಾಗಿ ಅಥಣಿ ನಗರದ ಸರ್ಕಾರಿ ಶಾಲೆ ಸಂಖ್ಯೆ–3ರಲ್ಲಿ ಕೇಂದ್ರೀಯ ವಿದ್ಯಾಲಯವನ್ನು ನಡೆಸಲು ಅನುಮತಿ ಲಭಿಸಿದ್ದು, ಈ ಹಿನ್ನೆಲೆಯಲ್ಲಿ ಆ ಶಾಲೆಗೆ ಭೇಟಿ ನೀಡಿ ಸೌಲಭ್ಯಗಳನ್ನು ಪರಿಶೀಲಿಸಿ, ಶಿಕ್ಷಕರು ಹಾಗೂ ಅಧಿಕಾರಿಗಳಿಂದ ಎದುರಿಸುತ್ತಿರುವ ಕುಂದುಕೊರತೆಗಳನ್ನು ಆಲಿಸಲಾಯಿತು.












