ಇತ್ತೀಚಿನ ಸುದ್ದಿ
ಬೆಳಗಾವಿ ಚಳಿಗಾಲದ ಅಧಿವೇಶನದ ನಾಳೆಯಿಂದ ಆರಂಭ: ಕುಂದನಗರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ
07/12/2025, 20:41
ಬೆಳಗಾವಿ(reporterkarnataka.com): ಬೆಳಗಾವಿಯ ಸುವರ್ಣ ವಿಧಾನ ಸೌಧದದಲ್ಲಿ ಡಿಸೆಂಬರ್ 8 ರಿಂದ 19ರ ವರೆಗೆ ನಡೆಯಲಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ನಗರಕ್ಕೆ ಆಗಮಿಸಿದರು.










ಸುವರ್ಣ ವಿಧಾನ ಸೌಧದ ಆವರಣದಲ್ಲಿ ನಿರ್ಮಿಸಲಾದ ಹೆಲಿಪಾಡ್ ಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿನಿಂದ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬರಮಾಡಿಕೊಂಡರು.
ಈ ಸಂದರ್ಭದಲ್ಲಿ, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ವಿಧಾನ ಪರಿಷತ್ ಸದಸ್ಯ ಚೆನ್ನರಾಜ್ ಹಟ್ಡಿಹೊಳಿ ಸೇರಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಇತರು ಉಪಸ್ಥಿತರಿದ್ದರು.












