10:09 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬೆಳಗಾವಿಯಲ್ಲಿ ಅರಾಜಕತೆ ಸೃಷ್ಟಿಗೆ ಯತ್ನ: ಚಿಕ್ಕಮಗಳೂರಿನಲ್ಲಿ ಸಿ.ಟಿ. ರವಿ ಆರೋಪ

18/12/2021, 19:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಬೆಳಗಾವಿಯಲ್ಲಿ ಎಂ.ಇ.ಎಸ್ ಕಾರ್ಯಕರ್ತರು ಪುಂಡಾಟ ನಡೆಸುತ್ತಿದ್ದಾರೆ. ಕೆಲವರು ಅರಾಜಕತೆ, ಸಂಘರ್ಷ ನಡೆಸುವ ಸಂಚು ರೂಪಿಸಿದ್ದಾರೆ ಎಂದು

ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ ಟಿ ರವಿ ಆರೋಪಿಸಿದರು.ಕೊಲ್ಲಾಪುರದಲ್ಲಿ ಕನ್ನಡ ಬಾವುಟ ಸುಡಲಾಯಿತು.ಅಲ್ಲಿ ಯಾವ ಪಕ್ಷ ಅಧಿಕಾರದಲ್ಲಿದೆ? ಕಾಂಗ್ರೆಸ್ ಅಲ್ಲಿಯ ಸರಕಾರದ ಪಾಲುದಾರರು. ಅರಾಜಕತೆ ಸೃಷ್ಟಿ ಮಾಡಿರುವ ಸಾಧ್ಯತೆ ಇದೆ. ಅರಾಜಕತವಾದಿಗಳ ಕುಮ್ಮಕ್ಕಿಗೆ ಬಲಿಯಾಗದೆ ಶಾಂತಿ, ಸೌಹಾರ್ದತೆ ಕಾಪಾಡುವಂತೆ ಅವರು ಮನವಿ ಮಾಡಿದರು.

ಮಹಾರಾಷ್ಟ್ರದಲ್ಲಿ ಲಕ್ಷಾಂತರ ಕನ್ನಡಿಗರಿದ್ದಾರೆ, ಕರ್ನಾಟಕದಲ್ಲಿ ಲಕ್ಷಾಂತರ ಸಂಖ್ಯೆ ಮರಾಠಿಗರಿದ್ದಾರೆ. ನಮ್ಮೆಲ್ಲರ ಭಾವನೆ ರಾಷ್ಟ್ರೀಯತೆ ಜೊತೆ ಹಾಸುಹೊಕ್ಕಾಗಿದೆ. ರಾಷ್ಟ್ರೀಯ ಹಿತಾಶಕ್ತಿಗೆ ಧಕ್ಕೆ ತರಲು ಕೆಲವರು ಷಡ್ಯಂತರ ನಡೆಸ್ತಾರೆ.

ಆ ಷಡ್ಯಂತರಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು