3:08 AM Wednesday26 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಬೆಳೆ ನಷ್ಟ: ರೈತರನ್ನು ಕಚೇರಿಗೆ ಅಲೆದಾಡಿಸದೆ ತಂತ್ರಾಂಶದಲ್ಲಿ ವರದಿ ಅಳವಡಿಸುವಂತೆ ಅಧಿಕಾರಿಗಳಿಗೆ ತಹಶೀಲ್ದಾರ್ ಸೂಚನೆ

28/11/2021, 09:43

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ರೈತರನ್ನು ಕಚೇರಿಗೆ ಅಲೆದಾಡಿಸದೆ ಹಾಗೂ ಬೆಳೆ ನಷ್ಟ ಪರಿಹಾರ ಅರ್ಜಿಗಳನ್ನು ಸ್ವೀಕರಿಸದೆ ಗ್ರಾಮ ಲೆಕ್ಕಾಧಿಕಾರಿಗಳು ಬೆಳೆ ನಷ್ಟ ವರದಿಯನ್ನು ಡಿ. 29ರ ಒಳಗೆ ತಂತ್ರಾಂಶದಲ್ಲಿ ಅಳವಡಿಸುವಂತೆ ತಹಶಿಲ್ದಾರ್ ಎನ್.ರಘುಮೂರ್ತಿ ತಾಕೀತು ಮಾಡಿದರು.

ನಗರದ ತಾಲೂಕು ಕಚೇರಿಯಲ್ಲಿ ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಅಧಿಕಾರಿಗಳಿಗೆ ಆಯೋಜಿಸಿದ್ದ ಬೆಳೆ ನಷ್ಟ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಕಳೆದ 15 ದಿನಗಳಿಂದ ವಾಯುಭಾರ ಕುಸಿತದಿಂದ ಸುರಿದ ಅಕಾಲಿಕ ಮಳೆಗೆ ತಾಲೂಕಿನಲ್ಲಿ ಸುಮಾರು 40 ಸಾವಿರ ಹೆಕ್ಟೇರ್ ಶೇಂಗಾ, 1200 ಹೆಕ್ಟೇರ್ ಕಡಲೆ, 8900 ಹೆಕ್ಟೇರ್ ಈರುಳ್ಳಿ, 770 ಹೆಕ್ಟೇರ್ ದಾಳಿಂಬೆ ಪಪ್ಪಾಯಿ ಬೆಳೆ ನಷ್ಟವಾಗಿದ್ದು. ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ರೈತರು ಈಗಾಲೆ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದು ಅನಾವಶ್ಯಕವಾಗಿ ಅರ್ಜಿಗಳನ್ನು ಪಡೆಯುವುದು , ಕಚೇರಿಗೆ ಅಲೆದಾಡಿಸದೆ ಈಗಾಗಲೆ  ನಷ್ಟವಾದ ವರದಿಯನ್ನು ಶನಿವಾರ, ಭಾನುವಾರ ರಜೆ ದಿನಗಳನ್ನು ಲೆಕ್ಕಿಸದೆ ಕಚೇರಿಯಲ್ಲಿ ಕುಳಿತು ಬೆಳೆ ಪರಿಯಾರ ತಂತ್ರಾಂಶದಲ್ಲಿ ರೈತರ ಬ್ಯಾಂಕ್ ಖಾತೆ ಸೇರಿದಂತೆ ಎಲ್ಲಾ ಮಾಹಿತಿ ಇದ್ದು ಅದನ್ನು ತಂತ್ರಾಂಶದಲ್ಲಿ ಅಳವಿಡಿಸಿ ರೈತರ ಖಾತೆಗೆ ನೇರವಾಗಿ ಬೆಳೆ ಪರಿಹಾರದ ಹಣ ಜಮ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸಭೆಯಲ್ಲಿ  ಸಹಾಯಕ ಕೃಷಿ ನಿರ್ದೇಶಕ ಡಾ.ಅಶೋಕ್, ತೋಟಗಾರಿಕೆ ಸಹಾಯಕ ನಿರ್ದೇಶಕ ಡಾ.ವಿರುಪಾಕ್ಷಪ್ಪ, ಕಂದಾಯ ನಿರೀಕ್ಷಕ ಲಿಂಗೇಗೌಡ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು