ಇತ್ತೀಚಿನ ಸುದ್ದಿ
ಬೆಲೆಯೇರಿಕೆ ನಡುವೆ ರಾಜ್ಯದ ಜನತೆಗೆ ಕರೆಂಟ್ ಶಾಕ್: ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ!
04/04/2022, 23:18
ಬೆಂಗಳೂರು(reporterkarnataka.com): ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಬಿಸಿಮುಟ್ಟಿದ್ದು ಇಂದು ಪ್ರತಿ ಯೂನಿಟ್ ಗೆ 35 ಪೈಸೆ ದರವನ್ನು ಹೆಚ್ಚಳ ಮಾಡಲಾಗಿದೆ. ಈ ಪರಿಷ್ಕೃತ ದರ ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ.
ಈ ಕುರಿತಂತೆ ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗದಿಂದ ವಿದ್ಯುತ್ ದರ ಪರಿಷ್ಕರಣೆ ಸಂಬಂಧ ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ಪ್ರತಿ ಯೂನಿಟ್ ಗೆ 35 ಪೈಸೆ ವಿದ್ಯುತ್ ದರ ಹೆಚ್ಚಳದ ಮಹತ್ವದ ಘೋಷಣೆಯನ್ನು ಘೋಷಿಸಿದೆ. ಏಪ್ರಿಲ್ 1ರಿಂದ ಈ ದರ ಏರಿಕೆ ಜಾರಿಗೆ ಬರಲಿದೆ. ಜೆಸ್ಕಾ, ಮೆಸ್ಕಾಂ, ಬೆಸ್ಕಾಂ ವ್ಯಾಪ್ತಿಯಲ್ಲಿ ಏಪ್ರಿಲ್ 1ರಿದಂ ಜಾರಿಗೆ ಬರುವಂತೆ ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ ಮಾಡಲಾಗುತ್ತಿದೆ ಎಂಬುದಾಗಿ ಘೋಷಿಸಲಾಗಿದೆ.
ವಿದ್ಯುತ್ ದರದ ಹೆಚ್ಚಳದ ಜೊತೆಗೆ ನಿಗದಿತ ಶುಲ್ಕವನ್ನು ಕೂಡ ಏರಿಕೆ ಮಾಡಲಾಗಿದೆ. ಫಿಕ್ಸಿಡ್ ಚಾರ್ಜ್ ಅನ್ನೂ ರೂ.10 ರಿಂದ 30ಕ್ಕೆ ಹೆಚ್ಚಳ ಮಾಡಲಾಗಿದೆ. ಈ ಮೂಲಕ ಕೆ ಇ ಆರ್ ಸಿ ವಿದ್ಯುತ್ ಬಳಕೆದಾರರಿಗೆ ಬಿಗ್ ಶಾಕ್ ನೀಡಿದೆ.