9:05 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬೆಳಗಾವಿ ಅಧಿವೇಶನ ವಿಫಲಗೊಳಿಸಲು  ಷಡ್ಯಂತ್ರ ನಡೆಯುತ್ತಿದೆ: ಚಿಕ್ಕಮಗಳೂರಿನಲ್ಲಿ  ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  

22/12/2021, 17:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com 

ಬೆಳಗಾವಿಯಲ್ಲಿ ಎಂಇಎಸ್ ಜತೆ ಕಾಂಗ್ರೆಸ್ ಸೇರಿರೋ ಗುಮಾನಿ ಇದೆ. ಸರ್ಕಾರಕ್ಕೆ ಕೆಟ್ಟ ಹೆಸರು ತಂದು, ಅಧಿವೇಶನವನ್ನ ವಿಫಲಗೊಳಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಎಂಇಎಸ್ ಇರಬೇಕಾದದ್ದು ಮಹಾರಾಷ್ಟ್ರದಲ್ಲಿ ಕರ್ನಾಟಕದಲ್ಲಿ ಅಲ್ಲ. ಕರ್ನಾಟಕದಲ್ಲಿ ಕನ್ನಡಿಗರ-ಮರಾಠಿ ಬೇಧಭಾವವಿಲ್ಲ, ಯೋಜನೆಗಳನ್ನ ಇಬ್ಬರಿಗೂ ನೀಡಿದ್ದೇವೆ. ಜಾತಿ-ಧರ್ಮ ನೋಡದೆ ಬಿಜೆಪಿ ಸರ್ಕಾರ ಏಖಮುಖವಾಗಿ ಯೋಜನೆ-ಅನುದಾನ ಕೊಡುತ್ತಿದೆ ಎಂದು ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ನುಡಿದರು.

ಬೆಳಗಾವಿ, ಬೀದರ್, ಬಿಜಾಪುರ, ಚಿಕ್ಕೋಡಿ ಭಾಗದವರನ್ನ ಒಂದೇ ತಾಯಿ ಮಕ್ಕಳಂತೆ ನೋಡಿದ್ದೇವೆ.ಅನಾವಶ್ಯಕವಾಗಿ ರಾಜಕೀಯ ಗಲಭೆ ಎಬ್ಬಿಸುತ್ತಿರುವವರ ಬಗ್ಗೆ ಎಚ್ಚರಗೊಳ್ಳಬೇಕಿದೆ. 

ಗೂಂಡಾ ಕಾಯ್ದೆ, ದೇಶದ್ರೋಹದ ಕಾಯ್ದೆಯಡಿ ಕ್ರಮಕೈಗೊಳ್ಳಲು ಸರ್ಕಾರ ಮುಂದಾಗಿದೆ. ಮಹಾರಾಷ್ಟ್ರ ಸರ್ಕಾರವೇ ಇದಕ್ಕೆ ಕುಮ್ಮುಕ್ಕು ನೀಡುತ್ತಿದೆ ಎಂದು ಅವರು ಆಪಾದಿಸಿದರು.

ಮಹಾರಾಷ್ಟ್ರ ಸಿಎಂ ಮರಾಠಿಗರಿಗೆ ಮಾತ್ರ ಸಿಎಂ ಅಲ್ಲ, ಇಡೀ ರಾಜ್ಯಕ್ಕೆ ಸಿಎಂ ಅಕ್ಕಪಕ್ಕದವರ ಜೊತೆ ಚೆನ್ನಾಗಿರಬೇಕು. ನೀವು ಮಹಾರಾಷ್ಟ್ರಕ್ಕೆ ಹೋಗಕ್ಕಾಗಲ್ಲ, ನಾವು ಕಳಿಸಿಲ್ಲ ಎಲ್ಲರೂ ಅಣ್ಣ-ತಮ್ಮಣ್ಣಂದಿರಂತೆ ಬದುಕಬೇಕೆಂದು ಮನವಿ ಮಾಡುತ್ತೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು