4:10 AM Wednesday27 - November 2024
ಬ್ರೇಕಿಂಗ್ ನ್ಯೂಸ್
ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ…

ಇತ್ತೀಚಿನ ಸುದ್ದಿ

ಬೆಳಗಾವಿಯ ಅಥಣಿ: ಕೈ ಕಾಲು ಕಟ್ಟಿದ ಸ್ಥಿತಿಯಲ್ಲಿ ವ್ತಕ್ತಿಯ ಶವ ಪತ್ತೆ; ಕೊಲೆಗೈದು ಬಾವಿಗೆಸೆದ ಶಂಕೆ

03/04/2023, 18:58

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಶಿರೂರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಕೊಳೆತ ಗಂಡಸಿನ ಶವವೊಂದು ಬಾವಿಯಲ್ಲಿ ಪತ್ತೆಯಾಗಿದೆ.
ಪಾಂಡೇಗಾವ ಗ್ರಾಮದ ಹೊರವಲಯದ ಖಿಳೆಗಾಂವ ಆಗ್ರಾನಿ ಹಳ್ಳದ ಪಕ್ಕದ ಭಾವಿಯೊಂದರಲ್ಲಿ ಶವ ಪತ್ತೆಯಾಗಿದ್ದು, ಸುಮಾರು ದಿನಗಳ ಹಿಂದೆ ಕೊಲೆ ಗೈದು ಸೊಂಟಕ್ಕೆ ಕಲ್ಲು ಕಟ್ಟಿ ಬಾವಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.


ಮೈ ಮೇಲೆ ಕೆಂಪು ಬಣ್ಣದ ಟಿ ಶರ್ಟ್ ಕಂದು ಕಪ್ಪು ಬಣ್ಣದ ಪ್ಯಾಂಟ್ ಇದೆ. ಸುಮಾರು ದಿನಗಳಿಂದ ಬಾವಿಯಲ್ಲೇ ಇದ್ದರಿಂದ ಸಂಪೂರ್ಣ ಕೊಳೆತು ಗುರುತು ಸಿಗದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ..
ಬಾವಿಯಲ್ಲಿನ ನೀರು ಕಡಿಮೆ ಯಾದ್ಧರಿಂದ ಶವವನ್ನು ಸ್ಥಳೀಯ ರೈತನೊಬ್ಬರಿಗೆ ಕಾಣಿಸಿದಾಗ ಕೂಡಲೇ ಅಥಣಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಘಟನಾ ಸ್ಥಳಕ್ಕೆ ದೌಡಾಯಿಸಿದ ಅಥಣಿ ಪಿಎಸ್ಐ ಶಿವಶಂಕರ ಮುಖರಿ ಹಾಗೂ ತಂಡ ಭೇಟಿ ನೀಡಿ ಅಥಣಿ ಅಗ್ನಿಶಾಮಕ ಸಿಬ್ಬಂದಿಗಳ ಸತತ ಮೂರು ಗಂಟೆ ಕಾರ್ಯಾಚರಣೆ ನಡೆಸಿ ಶವ ಹೊರ ತೆಗೆಯಲಾಗಿದೆ. ಶವ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು ವ್ಯಕ್ತಿಯ ಬಗ್ಗೆ ಖಚಿತ ಮಾಹಿತಿ ದೊರೆತಿಲ್ಲ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮರಣೋತ್ತರ ಪರೀಕ್ಷೆ ಹಾಗು ಪೊಲೀಸ್ ತನಿಖೆ ನಂತರವೇ ಶವ ಯಾರದ್ದು ಕೃತ್ಯ ವೆಸಗಿರುವರು ಯಾರು ಅಂತಾ ಗೊತ್ತಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು