3:50 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಬೆಳಗಾವಿ: ಪ್ರವಾಹ ಪೀಡಿತ ಪ್ರದೇಶಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ; ಪರ್ಯಾಯ ವ್ಯವಸ್ಥೆಗೆ ಕ್ರಮದ ಭರವಸೆ

25/07/2021, 15:20

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಳೆದು ಒಂದು‌ ವಾರದಿಂದ ಸುರಿಯುತ್ತಿರುವ ಅವ್ಯಾಹತ ಮಳೆಯಿಂದ ಪ್ರವಾಹ ಪೀಡಿತವಾದ ಬೆಳಗಾವಿ ಜಿಲ್ಲೆಯ ಹಿರಣ್ಯಕೇಶಿ ನದಿಪಾತ್ರದ ವಿವಿಧ ಪ್ರದೇಶಗಳಿಗೆ ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಪಟ್ಟಣಕ್ಕೆ ಭಾನುವಾರ ಭೇಟಿ ನೀಡಿದ ಅವರು, ಪ್ರವಾಹದಿಂದ ಬಾಧಿತರಾಗಿರುವ ಸಂತ್ರಸ್ತರ ಅಹವಾಲುಗಳನ್ನು ಆಲಿಸಿದರು.

ನೆರೆಯ ಮಹಾರಾಷ್ಟ್ರ ರಾಜ್ಯ ಹಾಗೂ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ವ್ಯಾಪಕ ಮಳೆಯಾದ ಪರಿಣಾಮ ಹಿರಣ್ಯಕೇಶಿ, ಕೃಷ್ಣಾ, ವೇದಗಂಗಾ, ಘಟಪ್ರಭಾ, ಮಲಪ್ರಭಾ ಸೇರಿದಂತೆ ಜಿಲ್ಲೆಯ ಸಪ್ತ  ನದಿಗಳಲ್ಲಿ ಹಾಗೂ ಬೆಳಗಾವಿ ಸಮೀಪದ ಬಳ್ಳಾರಿ ನಾಲಾಗಳಲ್ಲಿ ನೀರಿನ ಹರಿವು ಹೆಚ್ಚಳಗೊಂಡು ಅಕ್ಕಪಕ್ಕದ ಕೆಲ ಗ್ರಾಮಗಳು ಜಲಾವೃತಗೊಂಡಿವೆ.
ಹಿರಣ್ಯಕೇಶಿ ನದಿ ತೀರದಲ್ಲಿರುವ ಸಂಕೇಶ್ವರ ಪಟ್ಟಣದ ಮಠಗಲ್ಲಿ, ಕುಂಬಾರ ಓಣಿ ಹಾಗೂ ನದಿಗಲ್ಲಿಯ ಬಳಿಯ ಮುಳುಗಡೆ ಪ್ರದೇಶಗಳನ್ನು ಮುಖ್ಯಮಂತ್ರಿಗಳು ವೀಕ್ಷಿಸಿದರು. ಇದಾದ ಬಳಿಕ ಶಂಕರಲಿಂಗ ಕಾರ್ಯಾಲಯದಲ್ಲಿ ಆರಂಭಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಂತ್ರಸ್ತರ ಜತೆ ಮಾತನಾಡಿದ ಅವರು, ಸಂಕೇಶ್ವರ ಪಟ್ಟಣದಲ್ಲಿ ಪ್ರತಿ ವರ್ಷ ಪ್ರವಾಹದಿಂದ ಬಾಧಿತಗೊಳ್ಳುವ ಮನೆಗಳ ಶಾಶ್ವತ ಸ್ಥಳಾಂತರಕ್ಕೆ ಐವತ್ತು ಎಕರೆ ಭೂಮಿ‌ ಲಭ್ಯವಿದೆ. ಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸಿಕೊಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಸಂತ್ರಸ್ತರು ಸಹಕರಿಸಿದರೆ ಐವತ್ತು ಎಕರೆ ಜಾಗದಲ್ಲಿ ಮನೆಗಳನ್ನು ಒದಗಿಸಲಾಗುತ್ತದೆ.
ಮೂರ್ನಾಲ್ಕು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿದು ಜನರಿಗೆ ಸಂಕಷ್ಟ. ಸಂಕಷ್ಟಕ್ಕೆ ಒಳಗಾದ ಜನರಿಗೆ ಸೂಕ್ತ ಪರಿಹಾರ ವ್ಯವಸ್ಥೆ ಮಾಡಲಾಗುವುದು ಎಂದರು.
ಮಳೆ ನಿಂತ ಬಳಿಕ ಮನೆ ಮನೆ ಸಮೀಕ್ಷೆ ಕೈಗೊಂಡು ನಂತರ ಸೂಕ್ತ ಪರಿಹಾರವನ್ನು ನೀಡಲಾಗುವುದು.

ತಾತ್ಕಾಲಿಕವಾಗಿ ಆರಂಭಿಸಲಾಗಿರುವ ಕಾಳಜಿ ಕೇಂದ್ರಗಳಲ್ಲಿ ಊಟೋಪಹಾರ ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆಯನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಜನರು ಭಯ ಪಡುವ ಅಗತ್ಯವಿಲ್ಲ;  ಸರ್ಕಾರ ನಿಮ್ಮ ಜತೆಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್,  ಸಂತ್ರಸ್ತರಿಗೆ ಎನ್.ಡಿ.ಆರ್.ಎಫ್.‌ಅಡಿ‌ ಪರಿಹಾರ ವಿತರಣೆಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಎಲ್ಲರಿಗೂ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.
ಇದಾದ ಬಳಿಕ ನಿಪ್ಪಾಣಿ ತಾಲ್ಲೂಕಿನ ಯಮಗರ್ಣಿ ಗ್ರಾಮದ ಬಳಿ ಅತಿವೃಷ್ಟಿಯಿಂದ ಮುಳುಗಡೆಯಾಗಿರುವ ರಾಷ್ಟ್ರೀಯ ಹೆದ್ದಾರಿ-4 ಅನ್ನು ಸಿಎಂ ಪರಿಶೀಲಿಸಿದರು.

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು, 630 ಕುಟುಂಬಗಳಿಗೆ ತೊಂದರೆಯಾಗಿದ್ದು, ಐದು ಕಾಳಜಿ ಕೇಂದ್ರಗಳಲ್ಲಿ ಆಶ್ರಯ ನೀಡಲಾಗಿದೆ. ಊಟೋಪಹಾರ ಸೇರಿದಂತೆ ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.


ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಹುಕ್ಕೇರಿ ಮತಕ್ಷೇತ್ರದ ಶಾಸಕರೂ ಆಗಿರುವ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವರಾದ ಉಮೇಶ್ ಕತ್ತಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು