ಇತ್ತೀಚಿನ ಸುದ್ದಿ
ಬೆಳಗಾವಿ ಸುವರ್ಣ ಸೌಧಕ್ಕೆ ಪಂಚಮಸಾಲಿ ಪ್ರತಿಭಟನಾಕಾರರಿಂದ ಮುತ್ತಿಗೆ ಯತ್ನ: ಪೊಲೀಸ್ ಲಾಠಿಚಾರ್ಜ್ ಗೆ 10 ಮಂದಿಗೆ ಗಾಯ
10/12/2024, 22:51
ಬೆಳಗಾವಿ(reporterkarnataka.com): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಆಗ್ರಹಿಸಿ ಪ್ರತಿಭಟನಾಕಾರರು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ನಡೆಸಿದ ಲಾಠಿ ಚಾರ್ಜ್ ನಲ್ಲಿ ಸುಮಾರು 10 ಮಂದಿ ಗಾಯಗೊಂಡಿದ್ದಾರೆ.
ಲಾಠಿಚಾರ್ಜ್ ನಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು
ಕಲ್ಲು ತೂರಾಟ ನಡೆಸಿದರು. ಪೊಲೀಸರು ಮತ್ತಷ್ಟು ಲಾಠಿ ಚಾರ್ಜ್ ಮಾಡಿದ್ದರಿಂದ 10 ಮಂದಿ ಗಾಯಗೊಂಡಿದ್ದಾರೆ.
ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದನ್ನು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಖಂಡಿಸಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.