12:21 PM Tuesday26 - November 2024
ಬ್ರೇಕಿಂಗ್ ನ್ಯೂಸ್
ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಬೆಳಗಾವಿಯ ಐನಾಪುರ ಪಟ್ಟಣದಲ್ಲಿ 13.31 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ

16/11/2022, 20:46

ಬೆಳಗಾವಿ(reporterkarnataka.com): ಕಾಗವಾಡ ಮತಕ್ಷೇತ್ರದ ಐನಾಪೂರ ಪಟ್ಟಣದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಐನಾಪೂರ ಪಟ್ಟಣದಲ್ಲಿ ಸುಮಾರು 13.31 ಕೋಟಿ ರೂ. ವೆಚ್ಚದಲ್ಲಿ ತ್ಯಾಜ್ಯ ನೀರು ಶುದ್ಧೀಕರಣ ಘಟಕದ ಕಾಮಗಾರಿಗೆ ಭೂಮಿ ಪೂಜೆಯನ್ನು ಶಾಸಕ ಹಾಗೂ ಮಾಜಿ ಸಚಿವ
ಶ್ರೀಮಂತ ಪಾಟೀಲ್ ನೆರವೇರಿಸಿದರು.

ಈ ಸಮಯದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಇಂಜಿನಿಯರ್ ಗಳು ಕಾಮಗಾರಿಯ ಕುರಿತು ಸಾರ್ವಜನಿಕರಿಗೆ ಮಾಹಿತಿಯನ್ನು ಒದಗಿಸಿದರು.

ಸ್ಥಳೀಯ ಮುಖಂಡರು ಮಾತನಾಡಿ ಕಾಗವಾಡ ಮತಕ್ಷೇತ್ರದ ಶಾಸಕರು ನಮ್ಮ ಐನಾಪುರ ಪಟ್ಟಣದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದು, ಈಗಾಗಲೇ ಐನಾಪುರ ಪಟ್ಟಣಕ್ಕೆ ಸಂಪರ್ಕಿಸುವ ಎಲ್ಲ ರಸ್ತೆಯನ್ನು ಮಾಡಿದ್ದು, ಅದೇ ರೀತಿ ಶ್ರೀ ಸಿದ್ದೇಶ್ವರ ದೇವಸ್ಥಾನ ಅಭಿವೃದ್ಧಿಗೆ ಹಾಗೂ ದೇವಸ್ಥಾನದ ಆವರಣದಲ್ಲಿ ಟ್ರೀ ಪಾರ್ಕ್ ಮಂಜೂರು ಗೊಳಿಸಿದ್ದು ಮತ್ತು ಎಲ್ಲ ಸಮುದಾಯದ ದೇವಸ್ಥಾನಗಳ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಹಾಗೂ ಐನಾಪುರ ಪಟ್ಟಣದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸುಧಾರಣೆಗಾಗಿ ಅನುದಾನವನ್ನು ಮಂಜೂರು ಗೊಳಿಸಿದ್ದು, ತಾಲೂಕಾ ಕ್ರೀಡಾಂಗಣ, ಮುರಾರ್ಜಿ ವಸತಿ ಶಾಲೆ ನಿರ್ಮಾಣ ಕಾಮಗಾರಿಗೆ ಅನುದಾನ ಮಂಜೂರು ಗೊಳಿಸಿದ್ದು ಹೀಗೆ ಹಲವಾರು ಮಹತ್ವದ ಯೋಜನೆಗಳನ್ನು ಕೋಟ್ಯಂತರ ರೂ. ಗಳ ಅನುದಾನವನ್ನು ನಮ್ಮ ಜನಪ್ರಿಯ ಶಾಸಕರು ಐನಾಪುರ ಪಟ್ಟಣಕ್ಕೆ ತಂದು ನಮ್ಮ ಪಟ್ಟಣವನ್ನು ಕ್ಷೇತ್ರದಲ್ಲಿಯೇ ಒಂದು ಮಾದರಿ ಪಟ್ಟಣವನ್ನಾಗಿ ಅಭಿವೃದ್ಧಿಪಡಿಸಿದ್ದಾರೆ ಆದುದರಿಂದ ನಮ್ಮ ಐನಾಪುರ ಪಟ್ಟಣದ ಸಮಸ್ತ ಗ್ರಾಮಸ್ಥರು ಎಲ್ಲರೂ ನಮ್ಮ ಜನಪ್ರಿಯ ಶಾಸಕರಿಗೆ ಅಭಿನಂದನೆ ಸಲ್ಲಿಸೋಣ ಎಂದರು.


ಈ ಸಮಯದಲ್ಲಿ ಶಾಸಕರು ಮಾತನಾಡಿ ಐನಾಪುರ ಪಟ್ಟಣದಲ್ಲಿ ಈಗಾಗಲೇ ಸಾಕಷ್ಟು ಹಣದಾಣವನ್ನು ಮಂಜೂರು ಗೊಳಿಸಿ ಪಟ್ಟಣವನ್ನು ಅಭಿವೃದ್ಧಿಗೊಳಿಸಲಾಗಿದ್ದು, ಅದೇ ರೀತಿ ಇವತ್ತು ಐನಾಪುರ ಪಟ್ಟಣದಲ್ಲಿ ತ್ಯಾಜ್ಯ ನೀರು ಶುದ್ಧೀಕರಣ ಘಟಕದ ಹಾಗೂ ತತ್ಸಬಂಧಿ ಕಾಮಗಾರಿಗಳಿಗೆ ಸುಮಾರು 13.31 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದ್ದು,* ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಉತ್ತಮ ಗುಣಮಟ್ಟದ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು ಹಾಗೂ ಪಟ್ಟಣದ ಸಾರ್ವಜನಿಕರು ಎಲ್ಲರೂ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.

ಸ್ಥಳೀಯ ಮುಖಂಡರು, ಬಿಜೆಪಿ ಕಾಗವಾಡ ಮಂಡಲ ಅಧ್ಯಕ್ಷರು, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು, ನೀರಾವರಿ ಅಧಿಕಾರಿಗಳು, ಪಟ್ಟಣ ಪಂಚಾಯತ್ ಎಲ್ಲ ಸದಸ್ಯರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು