ಇತ್ತೀಚಿನ ಸುದ್ದಿ
ಬೆಳಗಾವಿ: ಕೆಎಸ್ಸಾರ್ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ; 3 ಮಂದಿ ಬಂಧನ ಹಿಂಡಲಗಾ ಜೈಲಿಗೆ
26/02/2025, 12:38

ಬೆಳಗಾವಿ(reporterkarnataka.com): ಟಿಕೆಟ್ ಸಂಬಂಧ ಬಸ್ಸಿನಲ್ಲಿ ನಡೆದ ಗಲಾಟೆ ವೇಳೆ ಮರಾಠಿ ಭಾಷೆಯಲ್ಲಿ ಮಾತನಾಡುವಂತೆ ಒತ್ತಾಯಿಸಿ ಕೆಎಸ್ಸಾರ್ಟಿಸಿ ಬಸ್ ಕಂಡಕ್ಟರಿಗೆ ಥಳಿಸಿದ ಪ್ರಕರಣ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ.
ಆರೋಪಿಗಳಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ನೀಡಿತ್ತು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೇಕುಂದ್ರಿ ಕೆ.ಎಚ್.ಗ್ರಾಮದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಂಡಕ್ಟರ್ ಜೊತೆ ವ್ಯಕ್ತಿಯೊಬ್ಬ ಮರಾಠಿಯಲ್ಲಿ ಮಾತನಾಡುವಂತೆ ಒತ್ತಾಯಿಸಿ, ನಂತರ ಗುಂಪು ಸೇರಿ ಹಲ್ಲೆ ನಡೆಸಿದ್ದರು.