ಇತ್ತೀಚಿನ ಸುದ್ದಿ
ಬೆಳಗಾವಿ ಅಧಿವೇಶನ | ಮಲ್ಲಳ್ಳಿ ಕೇಬಲ್ ಕಾರು: ಸದನದ ಗಮನ ಸೆಳೆದ ಮಡಿಕೇರಿ ಶಾಸಕ ಡಾ.ಮಂತರ್ ಗೌಡ
11/12/2025, 10:38
ಬೆಳಗಾವಿ(reporterkarnataka.com): ಕೊಡಗು ಜಿಲ್ಲೆಯಲ್ಲಿ ವಿಶೇಷವಾಗಿ ಸೋಮವಾರಪೇಟೆ ತಾಲ್ಲೂಕಿನಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮಲ್ಲಳ್ಳಿ ಜಲಪಾತವನ್ನು ಮತ್ತಷ್ಟು ಅಭಿವೃದ್ಧಿಗೊಳಿಸಿ ಕೇಬಲ್ ಕಾರ್ ಅಭಿವೃದ್ಧಿಪಡಿಸುವ ಬಗ್ಗೆ ಚಳಿಗಾಲದ ಅಧಿವೇಶನ 3ನೇ ದಿನವಾದ ಇಂದು ಸದನದಲ್ಲಿ ಮಾನ್ಯ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಡಾ.ಮಂತರ್ ಗೌಡ ರವರು ವಿಷಯ ಪ್ರಸ್ತಾಪಿಸಿ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರ ಗಮನ ಸೆಳೆದರು.












