11:06 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಬೆಳಗಾವಿ ಅಧಿವೇಶನ: ಮನಪಾ ಹೊರಗುತ್ತಿಗೆ ನೌಕರರ ಖಾಯಂಮಾತಿಗೆ ಶಾಸಕ ವೇದವ್ಯಾಸ ಕಾಮತ್ ಆಗ್ರಹ

19/12/2025, 18:18

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ಒಳಚರಂಡಿ, ಘನತ್ಯಾಜ್ಯ, ಕುಡಿಯುವ ನೀರು ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಅನೇಕರ ಬದುಕಿಗೆ ಸೇವಾ ಭದ್ರತೆಯೇ ಇಲ್ಲವಾಗಿದ್ದು ಅವರೆಲ್ಲರನ್ನು ನೇಮಕಾತಿ / ನೇರ ಪಾವತಿ ಅಥವಾ ಖಾಯಂಗೊಳಿಸಬೇಕು ಎಂದು ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಸರ್ಕಾರವನ್ನು ಆಗ್ರಹಿಸಿದರು.

ಈ ವರ್ಗದ ಎಲ್ಲಾ ಕಾರ್ಮಿಕರು ಬಹಳ ಕಷ್ಟಪಟ್ಟು ದುಡಿಯುವವರು. ಪರಿಶಿಷ್ಟ ಸಮುದಾಯಕ್ಕೆ ಸೇರಿದ ಬಂಧುಗಳು ಸಹ ಇದರಲ್ಲಿ ಹೆಚ್ಚಾಗಿದ್ದು ನಗರದ ಸ್ವಚ್ಛತೆಯ ಹಿಂದೆ ಅವರ ಅಪಾರ ಶ್ರಮವಿದೆ. ಒಂದು ದಿನ ಅವರೆಲ್ಲರೂ ಕರ್ತವ್ಯಕ್ಕೆ ಗೈರಾದರೆ ನಗರದ ಸ್ವಚ್ಛತೆಯಲ್ಲಿ ಅಲ್ಲೋಲ ಕಲ್ಲೋಲ ಉಂಟಾಗುತ್ತದೆ. ಇವರಿಗೆ ಯಾವುದೇ ಪಿಂಚಣಿ ಇಲ್ಲ. ಹೀಗಾಗಿ ಭವಿಷ್ಯದಲ್ಲಿ ಇವರು ತೀವ್ರ ಸಂಕಷ್ಟ ಎದುರಿಸಬೇಕಾದ ಪರಿಸ್ಥಿತಿ ಬರುತ್ತದೆ. ಈ ಬಗ್ಗೆ ಸರ್ಕಾರದ ಗಮನ ಸೆಳೆದಾಗೆಲ್ಲಾ ಆ ಪ್ರಸ್ತಾವನೆ ನಮ್ಮ ಮುಂದೆ ಎಂದು ಹೇಳುತ್ತಾ ಇದೀಗ ಎರಡೂವರೆ ಎರಡು ವರ್ಷಗಳಿದಿವೆ ಹೊರತು ಯಾವುದೇ ಕ್ರಮಕೈಗೊಂಡಿಲ್ಲ. ಮ.ನ.ಪಾದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಭಗವಾನ್ ದಾಸ್ ಮತ್ತು ಇತರರು ಪ್ರಕರಣದಲ್ಲಿ ಮಾನ್ಯ ಉಚ್ಚ ನ್ಯಾಯಾಲಯ ನೀಡಿರುವ ಆದೇಶವನ್ನು ಸರ್ಕಾರ ಪಾಲಿಸಿಲ್ಲ ಎಂದು ಸದನದ ಗಮನ ಸೆಳೆದರು.

ಈ ಕಾರ್ಮಿಕರು ಮಂಗಳೂರಿನಲ್ಲಿ ಎರಡೆರಡು ಬಾರಿ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ನಾವು ಅವರ ನ್ಯಾಯಯುತ ಬೇಡಿಕೆಗಳನ್ನು ಸಂಬಂಧಪಟ್ಟ ಸಚಿವರ ಹಾಗೂ ಇಲಾಖೆಯ ಕಾರ್ಯದರ್ಶಿಗಳ ಗಮನಕ್ಕೆ ತಂದಿದ್ದೇವೆ. ಸರ್ಕಾರ ಇನ್ನೂ ಸಹ ನಿರ್ಲಕ್ಷ್ಯ ತೋರಿದರೆ ಮುಂದಿನ ದಿನಗಳಲ್ಲಿ ನಾವೂ ಸಹ ಅವರೊಂದಿಗೆ ಪ್ರತಿಭಟನೆಯಲ್ಲಿ ಸೇರಿ ಕೊಳ್ಳಬೇಕಾಗುತ್ತದೆ. ಕಸ ಸಾಗಿಸುವ ವಾಹನಗಳಿಗೆ ವಿಮೆಯನ್ನೂ ಸಹ ನವೀಕರಣಗೊಳಿಸದೇ ಬೇಜವಾಬ್ದಾರಿ ತೋರಲಾಗಿದ್ದು ಒಂದು ವೇಳೆ ಯಾವುದೇ ದುರ್ಘಟನೆ ಸಂಭವಿಸಿ ಕಾರ್ಮಿಕರಿಗೆ ತೊಂದರೆಯಾದರೆ ಯಾರು ಹೊಣೆ? ಸರ್ಕಾರದ ಬಳಿ ವಾಹನ ವಿಮೆಗೂ ದುಡ್ಡಿಲ್ಲವೇ ಎಂದು ಶಾಸಕರು ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು