1:37 AM Thursday15 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಬೆಳಗಾವಿ: 146 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಸಂಪುಟ ಅನುಮೋದನೆ 

21/06/2021, 21:05

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಕ್ಷೇತ್ರದಲ್ಲಿ ಬಹುದಿನಗಳಿಂದ ನನೆಗುದಿಗೆ ಬಿದ್ದಿರುವ  ಪಶು ವೈದ್ಯಕೀಯ ಮಹಾವಿದ್ಯಾಲಯದ ಮೂರನೇ ಹಂತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು 36 ಕೋಟಿ ರೂಪಾಯಿಗಳ ಹೆಚ್ಚುವರಿ ಮೊತ್ತಕ್ಕೆ ಇಂದು ಸಚಿವ ಸಂಪುಟದ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.

ಇದರ ಜತೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ 110 ಕೋಟಿ ರೂಪಾಯಿಗಳ ಅಂದಾಜು ಮೊತ್ತದಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಇಂದಿನ ಸಚಿವ ಸಂಪುಟದ ಸಭೆಯಲ್ಲಿ  ಆಡಳಿತಾತ್ಮಕ ಅನುಮೋದನೆ ನೀಡಿದೆ. ಇದರಿಂದಾಗಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕಟ್ಟಡ ನಿರ್ಮಾಣ ಕಾಮಗಾರಿ ಕೂಡಲೇ ಕೈಗೆತ್ತಿಕೊಂಡು ಕಾಮಗಾರಿಯನ್ನು ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಲಕ್ಷ್ಮಣ ಸವದಿ ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು