ಇತ್ತೀಚಿನ ಸುದ್ದಿ
ಬೆಳಗಾವಿ: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ, ಭೋಜನ ಕೂಟ ಮುಂದೂಡಿಕೆ
10/12/2024, 17:59
ಬೆಳಗಾವಿ(reporterkarnataka.com): ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನದಿಂದ ಬೆಳಗಾವಿಯಲ್ಲಿ ಇಂದು(ಡಿ.10) ನಡೆಯಬೇಕಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ಮತ್ತು ಭೋಜನ ಕೂಟವನ್ನು ರದ್ದುಗೊಳಿಸಲಾಗಿದೆ.
ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ. ಶಿವಕುಮಾರ್ ಈ ವಿಷಯ ತಿಳಿಸಿದ್ದಾರೆ.
ಶೀಘ್ರದಲ್ಲೇ ಹೊಸ ದಿನಾಂಕವನ್ನು ಶಾಸಕರಿಗೆ ತಿಳಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರು ತಿಳಿಸಿದ್ದಾರೆ.
ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಆಡಳಿತಾರೂಢ ಕಾಂಗ್ರೆಸ್ ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಸಿಎಲ್ ಪಿ ಸಭೆಯನ್ನು ಕರೆಯಲಾಗಿದೆ.