10:22 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಬೆಳಗಾವಿಯಲ್ಲಿ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಆಚರಿಸಲು ಅವಕಾಶ ಬೇಡ: ಕರವೇ

25/10/2024, 18:40

ಬೆಳಗಾವಿ(reporterkarnataka.com): ರಾಜ್ಯೋತ್ಸವದ ದಿನದಂದು ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮೀತಿಗೆ ಕರಾಳ ದಿನಾಚರಣೆ ಆಚರಿಸಲು ಅವಕಾಶ ಕೊಡಬಾರದೆಂದು ಕರವೇ ಮನವಿ ಮಾಡಿದೆ.
ರಾಜ್ಯೋತ್ಸವದ ದಿನ ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಕನ್ನಡದ ಹಬ್ಬವನ್ನು ಆಚರಿಸುವ ಸಂದರ್ಭದಲ್ಲಿ, ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನಾಚರಣೆ ಆಚರಿಸುತ್ತಿದೆ. ಕನ್ನಡದ ನೆಲದಲ್ಲಿ ಕನ್ನಡಿಗರಿಗೆ ದ್ರೋಹ ಬಗೆಯುವ ಕರಾಳ ದಿನಾಚರಣೆಗೆ ಈ ವರ್ಷ ಯಾವುದೇ ಕಾರಣಕ್ಕೂ ಬೆಳಗಾವಿ ನಗರದಲ್ಲಿ ಅವಕಾಶ ನೀಡಬಾರದು. ಅನುಮತಿ ನೀಡುವದಿಲ್ಲ ಎಂದು ಸುಳ್ಳು ಹೇಳಿ ಪೋಲೀಸ್ ಇಲಾಖೆಯು ಮದ್ಯರಾತ್ರಿ ಅನುಮತಿ ನೀಡುವ ಮೂಲಕ ಕನ್ನಡಿಗರಿಗೆ ಅನ್ಯಾಯ ಮಾಡುತ್ತಾ ಬಂದಿದ್ದಾರೆ, ಅದೇ ರೀತಿ ಈ ಬಾರಿ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಈ ಕುರಿತು ನಾವು ಸರಕಾರಕ್ಕೆ ಉಪವಿಭಾಗಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಕರವೇ ತಾಲೂಕು ಅಧ್ಯಕ್ಷ ಸಂಜು ಬಡಿಗೇರ ಮಾತನಾಡಿ, ಕನ್ನಡಿಗರ ಮನವಿಯನ್ನು ದಿಕ್ಕರಿಸಿದರೆ ಸರ್ಕಾರದ ವಿರುದ್ಧ ಮತ್ತು ಪೋಲೀಸ್ ಇಲಾಖೆಯ ಕನ್ನಡ ವಿರೋಧಿ ಧೋರಣೆಯ ವಿರುದ್ದ ಕರವೇ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತದೆ ಎಂದು ಹೇಳಿದರು.
ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಮಾತನಾಡಿ, ರಾಜ್ತೋತ್ಸವದ ದಿನದಂದು ಕರಾಳ ದಿನಾಚರಣೆ ಮಾಡುತ್ತೇವೆ ಎಂದು ತಮ್ಮ ಬಳಿ ಬರುವ ಎಂಈಎಸ್ ನಾಯಕರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಅವರನ್ನು ಮುಂಜಾಗ್ರತವಾಗಿ ಬಂಧಿಸುವ ಮೂಲಕ ಕನ್ನಡದ ನೆಲದಲ್ಲಿ ಕನ್ನಡದ ಹಿತ ಕಾಯಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ರಮೇಶ ಡಂಗೇರ, ಸಂತೋಷ ಪೂಜೇರಿ, ದುಂಡಪ್ಪಾ ಬಡಿಗೇರ, ಅಮೂಲ ನಾವಿ, ರುದ್ರಯ್ಯಾ ಹಿರೇಮಠ, ಕುಮಾರ ಪಾಟೀಲ, ಸೌರಭ ಹಿರೇಮಠ, ಮಂಜುನಾಥ ಬಾನಸೆ, ಚನ್ನಪ್ಪಾ ಬಡಿಗೇರ ಹಾಗೂ ಇತರ ಕನ್ನಡ ಪರ ಹೋರಾಟಗಾರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು