11:53 AM Friday17 - July 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ

ಇತ್ತೀಚಿನ ಸುದ್ದಿ

ಬೆಳ್ಳಾರೆ: ಅಕ್ರಮ ಗೋವಧೆ ಪ್ರಕರಣ; ಮೂವರು ಆರೋಪಿಗಳ ಬಂಧನ

31/05/2026, 23:42

ಮಂಗಳೂರು(reporterkarnataka.com): ಅಕ್ರಮ ಗೋವಧೆ ಪ್ರಕರಣ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮೇ 29ರಂದು ಸಂಜೆ, ಅಕ್ರಮ ಗೋವಧೇ ನಡೆಯುತ್ತಿರುವ ಬಗ್ಗೆ ಬೆಳ್ಳಾರೆ ಠಾಣಾ ಪೊಲೀಸ್‌‌ ಉಪ ನಿರೀಕ್ಷಕರಾದ ಸಂತೋಷ್‌ ಬಿ ಪಿ ರವರಿಗೆ ಮಾಹಿತಿ ಬಂದ ಮೇರೆಗೆ, ಸಿಬ್ಬಂದಿಗಳೊಂದಿಗೆ ಮಾಹಿತಿ ಬಂದ ಸ್ಥಳವಾದ ಕಡಬ ಸವಣೂರು ಗ್ರಾಮದ ಮಾಂತೂರು ಮುಂಡತಡ್ಕ ಎಂಬಲ್ಲಿಗೆ ತೆರಳಿ ಪರಿಶೀಲಿಸಿದಾಗ, ತೋಟವೊಂದರಲ್ಲಿ ಜಾನುವಾರನ್ನು ವಧೆ ಮಾಡಿ ಮಾಂಸ ಮಾಡುತ್ತಿರುವುದು ಕಂಡುಬಂದಿರುತ್ತದೆ. ಈ ವೇಳೆ ಧಾಳಿ ನಡೆಸಿ ಮೂವರನ್ನು ಹಿಡಿದು ವಿಚಾರಿಸಲಾಗಿ, ಅವರುಗಳು ಕೆ ಅಬ್ದುಲ್‌‌ ರಫೀಕ್‌‌(37), ಅದ್ರಾಮ ಮಂತೂರು(41) ಮತ್ತು ಅಬ್ದುಲ್‌ ಖಾದರ್‌‌ ಪಣೆಮಜಲು (57) ಎಂಬುದಾಗಿ ತಿಳಿಸಿರುತ್ತಾರೆ. ವಿಚಾರಣೆಯ ವೇಳೆ ಯಾವುದೇ ಪರವಾನಿಗೆ ಪಡೆಯದೇ ಅಕ್ರಮವಾಗಿ ಗೋವಧೆ ನಡೆಸಿ ಮಾಂಸ ಮಾಡುತ್ತಿರುವುದು ದೃಢಪಟ್ಟಿದ್ದು, ಸ್ಥಳದಲ್ಲಿದ್ದ ಜಾನುವಾರು ಮಾಂಸ, ಇತರೆ ಸೊತ್ತುಗಳನ್ನು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 36/2026, ಕಲಂ 4,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು