3:47 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಬೆಳಗ್ಗೆ 6ರಿಂದ ಮಧ್ಯಾಹ್ನ 2ರ ತನಕ ಕೋಳಿ ಅಂಗಡಿ ತೆರೆಯಲು ಅವಕಾಶ: ರಾಜ್ಯ ಸರಕಾರಕ್ಕೆ ಕೆಪಿಎಫ್ ಬಿಎ ಆಗ್ರಹ

23/05/2021, 19:26

ಮಂಗಳೂರು(reporterkarnataka news): ಕೋಳಿ ಅಂಗಡಿ ಮಾಲೀಕರು ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ. ಅದೇನೆಂದರೆ ರಾಜ್ಯಾದ್ಯಂತ ಕೋಳಿ ಮಾಂಸದ ಅಂಗಡಿಗಳನ್ನು ಬೆಳಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ತೆರೆಯಲಯ ಅವಕಾಶ ನೀಡಬೇಕು ಎಂದು ಕರ್ನಾಟಕ ಕುಕ್ಕುಟ ಕೃಷಿಕರ ಬ್ರೀಡರ್‌ಗಳ ಸಂಘ (ಕೆಪಿಎಫ್ ಬಿಎ) ರಾಜ್ಯ ಸರಕಾರವನ್ನು ಆಗ್ರಹಿಸಿದೆ. 

ಕೆಪಿಎಫ್ ಬಿಎ ಪಶು ಸಂಗೋಪನಾ ಮತ್ತು ಪಶುಪಾಲನಾ ಸೇವೆಗಳ ಇಲಾಖೆ ಆಯುಕ್ತರು ಮತ್ತು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಪ್ರಸ್ತುತ ಮುಂಜಾನೆ 6ರಿಂದ ಬೆಳಗ್ಗೆ 10ರವರೆಗೆ ಕಾರ್ಯನಿರ್ವಹಿಸಲು ಅವಕಾಶವಿದೆ. ಈ ಅವಧಿಯನ್ನು ವಿಸ್ತರಿಸಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯ ಕಾರ್ಯದರ್ಶಿಗೆ ಕಳುಹಿಸಲಾಗಿರುವ ಪತ್ರದಲ್ಲಿ ಕೆಪಿಎಬಿಎ ಅಧ್ಯಕ್ಷ ಡಾ.ಸುಶಾಂತ್ ರೈ ಬಿ, ಕೋಳಿಯು ಅತಿ ಅಗ್ಗದ ಪ್ರೊಟೀನ್ ಮೂಲವಾಗಿದ್ದು, ಪ್ರತಿರೋಧ ಶಕ್ತಿಯನ್ನು ಉತ್ತೇಜಿಸುವಂತದ್ದೂ ಆಗಿದೆ. ಇದಕ್ಕೆ ಬೆಂಬಲ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಪಶು ಸಂಗೋಪನಾ ಮತ್ತು ಪಶುಪಾಲನಾ ಸೇವೆಗಳ ಇಲಾಖೆ ಆಯುಕ್ತರು ಮತ್ತು ಮುಖ್ಯ ಕಾರ್ಯದರ್ಶಿ ಕೆಪಿಎಬಿಎ ಬರೆದಿರುವ ಪತ್ರದಲ್ಲಿ, ಕುಕ್ಕುಟ ಉತ್ಪನ್ನಗಳು ಬೇಗನೆ ಕೆಡುವ ಸ್ವರೂಪದ್ದಾಗಿದ್ದು, ಸಾಂಕ್ರಾಮಿಕ ಕಾಲಘಟ್ಟದಲ್ಲಿ ಸರಕಾರ ಈ ಉದ್ಯಮದ ಚೇತರಿಕೆಗೆ ಸರಕಾರ ನೆರವಾಗಬೇಕು ಎಂದು ಒತ್ತಾಯಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು