2:40 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಬೆಳ್ಮಣ್: ರೇಶನ್ ನಲ್ಲಿ ಕಲಬೆರಕೆಯ ಅಕ್ಕಿ ವಿತರಣೆ; ತನಿಖೆಗೆ ಪಡಿತರ ಚೀಟಿ ಸಂಘದ ರಾಜ್ಯಾಧ್ಯಕ್ಷ ಆಗ್ರಹ

28/05/2021, 14:51

ಡಿ.ಆರ್ .ಜಗದೀಶ್ ದೇವಲಾಪುರ ನಾಗಮಂಗಲ

info.reporterkarnataka@gmail.com

ರಾಜ್ಯದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮ ವ್ಯಾಪ್ತಿಯಲ್ಲಿ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಸೇರಿಸಿ ವಿತರಿಸಿದ್ದು, ತಕ್ಷಣ ಉತ್ತಮ ಅಕ್ಕಿ ನೀಡಬೇಕು ಹಾಗೂ ಈ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ರಾಜ್ಯ ಪಡಿತರ ಚೀಟಿ ಸಂಘದ ರಾಜ್ಯಾಧ್ಯಕ್ಷ ಕೆ. ಕೃಷ್ಣಪ್ಪ ಅವರು ಆಗ್ರಹಿಸಿದ್ದಾರೆ. 

ಅವರಿಂದು ಮಾಧ್ಯಮದೊಂದಿಗೆ ಮಾತನಾಡುತ್ತ ರಾಜ್ಯದ ಕಾರ್ಕಳ ತಾಲ್ಲೂಕಿನ ಬೆಳ್ಮಣ್ ಗ್ರಾಮದಲ್ಲಿ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಕಲಬೆರಿಕೆಯಾಗಿ ಗ್ರಾಹಕರಿಗೆ ಈಗಾಗಲೇ ನೀಡಿದ್ದು, ಗ್ರಾಮದ ಜನತೆ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಗಮನಿಸಿ ಆತಂಕ ವ್ಯಕ್ತಪಡಿಸಿದ್ದಾರೆ. ಆಹಾರ ಇಲಾಖೆ ಈ ರೀತಿ ಪೂರೈಸಿರುವುದು ಹಾಗೂ ಖರೀದಿ ಮಾಡಿರುವುದು ಎಲ್ಲಿಂದ ಹಾಗೂ ಯಾವ ಸಹಕಾರ ಸಂಘ ಖರೀದಿ ಮಾಡಿದ್ದು  ಎಂಬ ಬಗ್ಗೆ ತನಿಖೆ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರ ಆಹಾರ ಇಲಾಖೆ ಸಂಬಂಧಪಟ್ಟ ಮಂತ್ರಿ ಯಾವುದೇ ಕ್ರಮ ಕೈಗೊಳ್ಳದೆ ಮೌನವಹಿಸಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ರಾಜ್ಯದಲ್ಲಿ ವಿವಿಧಡೆ ಕಲಬೆರಕೆಯ ಇಂತಹ ಪ್ರಕರಣದ ದೂರುಗಳು ಬಂದರೂ ಸಂಬಂಧಪಟ್ಟ ಇಲಾಖೆ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು