12:16 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ಗೃಹಿಣಿಯ ಬೆದರಿಸಿ ಕತ್ತಿನಿಂದ ಕರಿಮಣಿ ಸರ ಎಳೆದು ಆರೋಪಿ ಪರಾರಿ

10/12/2024, 12:27

ಬೆಳ್ತಂಗಡಿ(reporterkarnataka.com): ಇಲ್ಲಿನ ಕೊಯ್ಯೂರಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಕಸಿದು ಪರಾರಿಯಾಗಿರುವ ಘಟನೆ ನಡೆದಿದೆ.
ಕೊಯ್ಯೂರು ಗ್ರಾಮದ ಕೋರಿಯಾರ್ ನಿವಾಸಿ ದಾಮೋಧರ್ ಭಟ್ ಅವರ ಪತ್ನಿ ರಾಜೀವಿ(50) ಎಂಬವರು ಡಿ.9 ರಂದು ಮಧ್ಯಾಹ್ನ
ಬೆಳ್ತಂಗಡಿಯಿಂದ ಮನೆಗೆ ಹೋಗುತ್ತಿದ್ದಾಗ ಕೊಯ್ಯೂರು ಗ್ರಾಮದ ಪಾಂಬೇಲ್ ಕ್ರಾಸ್ ನಲ್ಲಿ ಇಳಿದು ಕೋರಿಯಾರ್ ಮನೆಗೆ ಮಣ್ಣು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಆರೋಪಿ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ನಿವಾಸಿ ಉಮೇಶ್ ಎಂಬಾತ ಹಿಂದಿನಿಂದ ಓಡಿ ಬಂದು ಮಹಿಳೆಯ ಕುತ್ತಿಗೆಯನ್ನು ಬಿಗಿಯಾಗಿ ಹಿಡಿದು ಬೊಬ್ಬೆ ಹಾಕಬೇಡಿ ಎಂದು ಬೆದರಿಸಿ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರವನ್ನು ಎಳೆದಿದ್ದು ಈ ವೇಳೆ ಕೈಯಲ್ಲಿ ಗಟ್ಟಿಯಾಗಿ ಹಿಡಿದು ಬೊಬ್ಬೆ ಹಾಕಿದಾಗ ಕರಿಮಣಿ ಎಳೆದ ರಭಸಕ್ಕೆ ಕುತ್ತಿಗೆ ,ಎದೆಗೆ ಗಾಯವಾಗಿದ್ದು ಕರಿಮಣಿ ಎರಡು ಭಾಗವಾಗಿದೆ ಒಂದು ತುಂಡು ಕರಿಮಣಿಯನ್ನು ಆರೋಪಿ ಉಮೇಶ್ ಗೌಡ ಹಿಡಿದು ಗುಡ್ಡದ ಕಡೆ ಓಡಿ ಪರಾರಿಯಾಗಿದ್ದಾನೆ. ಗಾಯಗೊಂಡ ರಾಜೀವಿ ಮಹಿಳೆ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸುಮಾರು ಒಂದು ಲಕ್ಷ ಮೌಲ್ಯದ 16 ಗ್ರಾಂ ಚಿನ್ನ ಕಳ್ಳತನ ಮಾಡಿರುವ ಬಗ್ಗೆ 309(6)BNS ಅಡಿಯಲ್ಲಿ ಆರೋಪಿ ಉಮೇಶ್ ಗೌಡ ವಿರುದ್ಧ ಪ್ರಕರಣ ದಾಖಲಾಗಿದ್ದು. ಬೆಳ್ತಂಗಡಿ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ನೇತೃತ್ವದ ವಿಶೇಷ ತಂಡ ಆರೋಪಿ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು