11:46 AM Wednesday31 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ಅರಣ್ಯ ಸಿಬ್ಬಂದಿಗಳ ಕಾರ್ಯಾಚರಣೆ; ಅಕ್ರಮವಾಗಿ ಸಾಗಿಸುತ್ತಿದ್ದ ಬೆಲೆಬಾಳುವ ಮರ ವಶ, 3 ಮಂದಿ ಸೆರೆ

01/02/2023, 00:08

ಬೆಳ್ತಂಗಡಿ(reporterkarnataka.com): ಅಕ್ರಮವಾಗಿ ಬೆಲೆಬಾಳುವ ಮರ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ಬೆಳ್ತಂಗಡಿ ತಾಲೂಕಿನ ಮೊಗ್ರುಗ್ರಾಮದ ಮುಗೇರಡ್ಕ ಎಂಬಲ್ಲಿಂದ ರಾತ್ರಿ ವೇಳೆ ದಾಳಿ ನಡೆಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಮರದ ದಿಮ್ಮಿ ವಶಪಡಿಸಿಕೊಂಡಿದ್ದು, ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂದರು ಶಾಖಾ ಉಪ ವಲಯ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಖಚಿತ ಮಾಹಿತಿಯ ಮೇಲೆ ಮೊಗ್ರು ಗ್ರಾಮದ ಮುಗೇರಡ್ಕ ಎಂಬಲ್ಲಿ ಅಕ್ರಮವಾಗಿ ಹೆಬ್ಬಲಸು, ಮಾವು ಹಾಗೂ ಕಾಡು ಜಾತಿ ದಿಮ್ಮಿಗಳನ್ನು ಸಾಗಣೆ ಮಾಡುತ್ತಿರುವ ಲಾರಿಯನ್ನು ಪತ್ತೆ ಹಚ್ಚಿದ್ದರು.ಲಾರಿಗೆ ಬೆಂಗಾವಲಾಗಿ ಸಂಚರಿಸುತ್ತಿದ್ದ ಪಾಣೆ ಮಂಗಳೂರಿನ ಅಬ್ಬಾಸ್, ಕಡಬ ಮರ್ದಾಳದ ಇರ್ಫಾನ್, ಇಳಂತಿಲ ಗ್ರಾಮದ ಅಂಡೆತ್ತಡ್ಕ ನಿವಾಸಿಗಳಾದ ಅಶ್ರಫ್, ರಹಿಮಾನ್ ಮರ ಕಡಿದ ಸ್ಥಳದ ವಾರೀಸುದಾರ ಮುರ ಗ್ರಾಮದ ಕೃಷ್ಣಪ್ಪ ಹಾಗೂ ಲಾರಿ ಚಾಲಕ ಬಂಟ್ವಾಳದ ಬೋಗೋಡಿ ನಿವಾಸಿ ಅಶ್ರಫ್ ಅಂಬೋನು ಅವರ ವಿರುದ್ಧ ಅರಣ್ಯ ಸಂರಕ್ಷಣೆ ಕಾಯ್ದೆಯಂತೆ ದೂರು ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು