9:29 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಬೆಳ್ತಂಗಡಿ | ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ: ಅಂಚೆ ವಿತರಕ ಸುರೇಶ್ ಬಂಧನ

10/06/2026, 21:45

ಬೆಳ್ತಂಗಡಿ(reporterkarnataka.com): ವಿವಾಹಿತ ಮಹಿಳೆಯನ್ನು ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕುತ್ತೋಡಿ ನಿವಾಸಿ ಪ್ರಸ್ತುತ ಅರಸಿಮಕ್ಕಿ ಗ್ರಾಮೀಣ ಅಂಚೆ ವಿತರಕ ಸುರೇಶ್ (35) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ವಿವಾಹಿತ ಮಹಿಳೆಯನ್ನು 2023ರ ಡಿಸೆಂಬರ್ ನಲ್ಲಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂ.7 ರಂದು ದೂರು ನೀಡಿದ್ದರು.
ಪ್ರಕರಣದ ಬಗ್ಗೆ ತನಿಖೆ ನಡೆಸಿದ ಧರ್ಮಸ್ಥಳ ಪೊಲೀಸರು ಆರೋಪಿ, ಅಂಚೆ ವಿತರಕ ಸುರೇಶ್ ನನ್ನು ಕಳೆಂಜದಲ್ಲಿ ಜೂ.8ರಂದು ರಾತ್ರಿ ಬಂಧಿಸಿ ವಿಚಾರಣೆ ನಡೆಸಿ ಜೂ.9ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಣಿ ಸಿ.ಕೆ. ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ಧರ್ಮಸ್ಥಳ ಪ್ರಭಾರ ಸಬ್ ಇನ್ಸ್ಪೆಕ್ಟರ್ ಕಿಶೋರ್.ಪಿ, ಸಬ್ ಇನ್ಸ್ಪೆಕ್ಟರ್ ಸಮರ್ಥ ಆರ್ ಗಾಣಿಗೇರ ತಂಡದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು